ಉಡುಪಿ –
ಅಗ್ನಿಪಥ ಯೋಜನೆಯಡಿ ನಾಲ್ಕು ವರ್ಷಗಳ ಸೇವಾ ತರಬೇತಿ ಮುಗಿಸಿ ಹೊರಬರುವ ಅಗ್ನಿವೀರರಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಶೇ 75ರಷ್ಟು ಮೀಸಲಾತಿ ನೀಡುವ ಯೋಚನೆ ಇದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.ಉಡುಪಿ ಯಲ್ಲಿ ಮಾತನಾಡಿದ ಅವರು ಅಗ್ನಿಪಥ ಯೋಜನೆಗೆ ಸಹಕಾರ ನೀಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ದೈಹಿಕ ಶಿಕ್ಷಣ ಶಿಕ್ಷಕರಾಗಲು ಅರ್ಹತೆ ಹೊಂದಿರುವ ಅಗ್ನಿವೀರರನ್ನು ಮೀಸಲಾತಿ ಹಾಗೂ ರೋಸ್ಟರ್ ನಿಯಮದಡಿ ನೇಮಕ ಮಾಡಿಕೊಳ್ಳ ಲಾಗುವುದು.ಈ ಸಂಬಂಧ ಪರಿಶೀಲನೆಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಟಿಪ್ಪಣಿ ನೀಡಲಾಗಿದೆ ಎಂದರು
ಪಠ್ಯ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಗೆ ಆದೇಶ ನೀಡಿದೆಯೋ ಇಲ್ಲವೋ ಗೊತ್ತಿಲ್ಲ ಆದರೆ ಹಿಂದೆ ಸಮಿತಿ ಹಾಗೂ ಪ್ರೊ. ಬರಗೂರು ರಾಮಚಂದ್ರಪ್ಪ ಸಮಿತಿ ಯಾವ ಮಾನದಂಡ ಗಳ ಆಧಾರದ ಮೇಲೆ ಪಠ್ಯ ಪರಿಷ್ಕರಣೆ ಮಾಡಿದೆಯೋ ಅದೇ ಮಾನದಂಡಗಳಡಿ ರೋಹಿತ್ ಚಕ್ರತೀರ್ಥ ಸಮಿತಿ ಯೂ ಪಠ್ಯ ಪರಿಷ್ಕರಣೆ ಮಾಡಿದೆ ಎಂದು ಸಚಿವರು ಸಮರ್ಥಿಸಿಕೊಂಡರು.
ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌ ಡರು ನೀಡಿರುವ ಸಲಹೆಗಳ ಕುರಿತು ಸರ್ಕಾರ ಚರ್ಚಿ ಸಲಿದೆ. ಸಾಹಿತಿಗಳ ಆಕ್ಷೇಪಗಳು ಹಾಗೂ ಸಲಹೆಗಳನ್ನು ಪರಿಗಣಿಸಿ ಅವರಿಗೆ ಮನವರಿಕೆ ಮಾಡಿಕೊಡಲಿದೆ ಎಂದು ಕೋಟ ತಿಳಿಸಿದರು.