ಶಿವಮೊಗ್ಗ –
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ ಚುನಾವಣೆಯನ್ನು ಬರುವ ಮಾರ್ಚ್ ಇಲ್ಲವೇ ಏಪ್ರೀಲ್ ಒಳಗಾಗಿ ಮಾಡಲಾಗುವುದು ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಮಾರ್ಚ್ ಇಲ್ಲವೇ ಏಪ್ರಿಲ್ ಒಳಗೆ ತಾಲ್ಲೂಕು,ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದರು.

ಇನ್ನೂ ರಾಜ್ಯದಲ್ಲಿ ತಾಲ್ಲೂಕು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಬೇಕು ಎಂದು ಈ ಹಿಂದೆಯೇ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿತ್ತು. ಆಯೋಗವೂ ದಿನಾಂಕ ನಿಗದಿ ಮಾಡಿತ್ತು. ಆದರೆ ಚುನಾವಣೆ ನಡೆಸುವ ಬಗ್ಗೆ ಆಕ್ಷೇಪಣಾ ಅರ್ಜಿಗಳು ಬಂದ ನಂತರ ಚುನಾವಣೆಯನ್ನು ಮುಂದೂಡಲಾಗಿತ್ತು. ಲಕ್ಷ್ಮಿ ನಾರಾಯಣ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ವರದಿ ಬಂದ ಕೂಡಲೇ ಚುನಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎನ್ನುತ್ತಾ ಚುನಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ಸಚಿವರು ಶುಭ ಸುದ್ದಿಯನ್ನು ನೀಡಿದರು.