ಬೆಳಗಾವಿ –
ಶಿಕ್ಷಕರ ನೇಮಕಾತಿ ಮತ್ತು ವರ್ಗಾವಣೆ – ಸದನದಲ್ಲಿ ಮಾಹಿತಿ ನೀಡಿದ ಸಚಿವ ಮಧು ಬಂಗಾರಪ್ಪ….. ಹೌದು ಕೆಪಿಎಸ್ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸದ್ಯ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಶಿಕ್ಷಕರ ಕೋರಿಕೆ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅದು ಪೂರ್ಣಗೊಂಡ ನಂತರ ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಮಾಡಿ, ಕೆಪಿಎಸ್ ಶಾಲೆಗಳ ಖಾಲಿ ಹುದ್ದೆ ಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.
ಕೆಪಿಎಸ್ ಶಾಲೆಗಳಿಗೆ ‘ಉತ್ತಮ ಕಲಿಕೆ, ಉಜ್ವಲ ಭವಿಷ್ಯ’ ಎಂಬ ಧ್ಯೇಯವಾಕ್ಯ ನಿಗದಿಪಡಿಸಲಾಗಿದೆ. ಏಕರೂಪದ ಗುಣಮಟ್ಟ ಕಾಯ್ದುಕೊಳ್ಳಲು ‘ಕರ್ನಾಟಕ ಪಬ್ಲಿಕ್ ಶಾಲಾ ಮಾನಕಗಳು’ ಎಂಬ ಕೈಪಿಡಿಯನ್ನು ಸಿದ್ಧಪಡಿಸ ಲಾಗಿದೆ. ಇದರನ್ವಯ ಪ್ರತಿ ಶಾಲೆಯಲ್ಲಿ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಸಾಕಾಗುವಷ್ಟು ಶೈಕ್ಷಣಿಕ ಮತ್ತು ಭೌತಿಕ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.
ಸುದ್ದಿ ಸಂತೆ ನ್ಯೂಸ್ ಬೆಳಗಾವಿ……





















