ಬೆಂಗಳೂರು –
ರಾಜ್ಯದ ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭರ್ಜರಿ ಬಂಪರ್ ಕೊಡುಗೆ ಯನ್ನು ಘೋಷಣೆ ಮಾಡಿದ್ದಾರೆ ಹೌದು ವರ್ಷದ ಅವಧಿ ಒಳಗಾಗಿ ಸಮುದಾಯದಿಂದ ಒಂದು ಸಾವಿರ ಕೋಟಿ ಆರ್ಥಿಕ ನೆರವು ಒದಗಿ ಬರುವ ನಿರೀಕ್ಷೆ ಇದೆ ಎಂದು ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.ಸೊರಬ ತಾಲ್ಲೂಕು ಕುಬಟೂರಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾ ಗಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಹತ್ತು ಲಕ್ಷ ರೂಪಾಯಿಗಳ ಪಾಠೋಪಕರಣ ಮತ್ತು ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡಿದ ನಂತರ ಮಾತನಾಡಿದ ಅವರು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿ ಗಿಂತ ಕಡಿಮೆ ಇಲ್ಲದಂತೆ ಎಲ್ಲಾ ರೀತಿಯ ಅಗತ್ಯ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಮಾದರಿ ಶಾಲೆಗಳನ್ನಾಗಿ ಅಭಿವೃದ್ಧಿಪಡಿ ಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ದಿಸೆ ಯಲ್ಲಿ ಸುಮಾರು 10 ಲಕ್ಷ ರೂಪಾಯಿಗಳ ಮೌಲ್ಯದ ವಸ್ತುಗಳನ್ನು ನೀಡಿ ತಾವು ಓದಿದ ಶಾಲೆ ಯನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದಾರೆ.
ಈ ನಿಟ್ಟಿನಲ್ಲಿ ಸ್ವತಹ ತಾವುಗಳು ಕೂಡ ಅವರ ಹಾದಿಯಲ್ಲಿಯೇ ಮುನ್ನಡೆದು ಮುಖ್ಯಮಂತ್ರಿ ಗಳಾಗಿದ್ದ ದಿವಂಗತ ಎಸ್ ಬಂಗಾರಪ್ಪನವರು ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ ಶಾಲೆಯ ಸರ್ವಾಂಗಿಣ ವಿಕಾಸಕ್ಕೆ ತಾವು ಬದ್ಧರಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಸುಮಾರು 46000 ಸರ್ಕಾರಿ ಶಾಲೆ ಗಳಿದ್ದು ಆ ಎಲ್ಲಾ ಶಾಲೆಗಳನ್ನು ಸರ್ಕಾರದ ಅನು ದಾನದಿಂದಲೇ ಅಭಿವೃದ್ಧಿಪಡಿಸಲು ಸಾಧ್ಯವಾ ಗದು.ಈ ಹಿಂದೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಇಂದು ಸಮಾಜದಲ್ಲಿ ಉನ್ನತ ಸ್ಥಾನ ಮಾನ ಹೊಂದಿದ್ದು, ಉತ್ತಮ ಜೀವನ ನಿರ್ವಹಣೆ ಮಾಡುತ್ತಿರುವ ಅನೇಕ ಜನರು ತಾವು ಓದಿದ ಹಾಗೂ ಇಂದು ತಮ್ಮ ಮಕ್ಕಳು ಮತ್ತು ತಮ್ಮ ಊರಿನಮಕ್ಕಳು ಓದುತ್ತಿರುವ ಶಾಲೆಗೆ ಋಣ ತೀರಿಸುವ ಭಾಗವಾಗಿ ಯಾವುದೇ ವಿಧದಲ್ಲಾ ದರೂ ನೆರವಾಗುವಂತೆ ಹಾಗೂ ಅಲ್ಲಿನ ಮಕ್ಕಳು ಜಗವಿಖ್ಯಾತರಾಗುವಂತೆ ಶ್ರಮಿಸಲು ಮನವಿ ಮಾಡಿದರು.
ಹಲವು ದಶಕಗಳ ಹಿಂದಿನ ಸರ್ಕಾರಿ ಶಾಲೆಗಳ ಸ್ಥಿತಿಗತಿಗಳು ಹಾಗೂ ಅವುಗಳ ಭೌತಿಕ ಸ್ವರೂಪ ಸಮಗ್ರವಾಗಿ ಬದಲಾವಣೆಗೊಂಡಿದೆ. ಪ್ರತಿಭಾ ವಂತ ಶಿಕ್ಷಕರುಗಳ ನೇಮಕವಾಗಿದೆ ಮಧ್ಯಾಹ್ನದ ಬಿಸಿ ಊಟ, ಪೌಷ್ಟಿಕ ಆಹಾರ, ಮೊಟ್ಟೆ, ಹಾಲು, ರಾಗಿ ಮಾಲ್ಟ್, ಸಮವಸ್ತ್ರ ಮತ್ತು ಪಠ್ಯಪುಸ್ತಕ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಿಂದ ಅನ್ವಯ ವಾಗುವಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ.
ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಪ್ರತಿ ಭಾವಂತ ಶಿಕ್ಷಕರೇ ಹೊಂದಿರುವ ಸರ್ಕಾರಿ ಶಾಲೆಗಳಿಗೆ ದಾಖಲಿಸಲು ಮುಂದಾಗುವ ಮನವಿ ಮಾಡಿದ ಅವರು, ಸರ್ಕಾರಿ ಶಾಲೆಯ ಸೊಗಡು ಮತ್ತು ಮಹತ್ವವನ್ನು ಅರಿಯುವಂತೆ ಅವರು ಮನವಿ ಮಾಡಿದರು.
ಉತ್ತರ ಕರ್ನಾಟಕದ ಏಳು ಜಿಲ್ಲೆಗಳ 1700 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾದ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಸುಮಾರು 38,000 ವಿದ್ಯಾರ್ಥಿಗಳು ದಾಖಲಾ ಗಿರುವುದು ವಿಶೇಷ ಎನಿಸಿದೆ ರಾಜ್ಯದ 46,000 ಶಾಲೆಗಳಿಗೆ ಸರ್ಕಾರ ಪ್ರತಿ ವರ್ಷ 44,000 ಕೋಟಿ ರೂಪಾಯಿಗಳ ಹಣ ವೆಚ್ಚ ಮಾಡುತ್ತಿದೆ.
ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಯ ಸುಮಾರು 56 ಲಕ್ಷ ಮಕ್ಕಳು ಹಾಗೂ ಪಿಯುಸಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದರು.
ಸುದ್ದಿ ಸಂತೆ ನ್ಯೂಸ್ ಸೊರಬ…..