ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ – ತೀವ್ರ ಮುಜುಗರ ಅನುಭವಿಸಿದ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿ ಮೇಲೆ ಕ್ರಮಕ್ಕೆ ಸೂಚಸಿದ ಸಚಿವರ ನಡೆಗೆ ಅಸಮಾಧಾನ…..

Suddi Sante Desk
ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ – ತೀವ್ರ ಮುಜುಗರ ಅನುಭವಿಸಿದ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿ ಮೇಲೆ ಕ್ರಮಕ್ಕೆ ಸೂಚಸಿದ ಸಚಿವರ ನಡೆಗೆ ಅಸಮಾಧಾನ…..

ಬೆಂಗಳೂರು

ವಿಡಿಯೋ ಕಾನ್ಫರೆನ್ಸ್ ವೇಳೆ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪಗೆ ವಿದ್ಯಾರ್ಥಿಯೊಬ್ಬ ತೀವ್ರ ಮುಜುಗರ ತಂದೊಡ್ಡಿದ್ದಾನೆ.ಹೌದು ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ ಅನ್ನುವುದರ ಮೂಲಕ ಮಧು ಬಂಗಾರಪ್ಪ ಅವರಿಗೆ ಅವಮಾನ ಮಾಡಿದ್ದಾನೆ.ವಿಧಾನಸೌಧದಲ್ಲಿ ಇವತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ NEET, JEE, CET ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು

ಈ ಕಾರ್ಯಕ್ರಮದ ಮಧ್ಯೆ ಘಟನೆ ನಡೆದಿದೆ. ವಿದ್ಯಾರ್ಥಿ ಭರತ್ ಎಂಬುವನ ವಿರುದ್ಧ ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದ್ದಾರೆ.ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿ ಭರತ್ ಎಂಬಾತ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ನೇರವಾಗಿಯೇ ಹೇಳಿದ್ದು, ಎಲ್ಲರೂ ನಕ್ಕಿದ್ದಾರೆ. ಮಾತನ್ನ ಗಂಭೀರವಾಗಿ ತೆಗೆದುಕೊಂಡ ಶಿಕ್ಷಣ ಸಚಿವರು ಕೋಪಗೊಂಡು ಕ್ರಮಕ್ಕೆ ಸೂಚನೆ ಕೊಟ್ಟಿದ್ದಾರೆ .

ಪದವಿ ಪೂರ್ವ ಕಾಲೇಜು ನಿರ್ದೇಶಕಿ ಸಿಂಧೂ ಬಿ ರೂಪೇಶ್ ಮತ್ತು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಅವರಲ್ಲಿ, ಯಾರು ನೋಡಿ ರೆಕಾರ್ಡ್ ಮಾಡಿ. ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.ವಿದ್ಯಾಮಂತ್ರಿಗೆ ಕನ್ನಡ ಬರಲ್ಲ ಎಂದ ಬಾಲಕ; ನಾಚಿಕೆ ಆಗಬೇಕು, ಹುಡುಕಿ ಕ್ರಮ ಕೈಗೊಳ್ಳಿ ಎಂದ ಮಧು ಬಂಗಾರಪ್ಪ ಮಾತಿಗೆ ಸಧ್ಯ ಸಾಕಷ್ಟು ಪ್ರಮಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.