ಗೋವು ಮತ್ತು ಪಶು ಸಂಗೋಪನೆ ವಿಷಯವನ್ನು ಪಠ್ಯಕ್ರಮದಲ್ಲಿ ಅಳವಡಿಸಿ ಸಚಿವ ಪ್ರಭು ಚವ್ಹಾಣ್

Suddi Sante Desk

ಬೆಂಗಳೂರು –

ಗೋವು ಮತ್ತು ಪಶುಸಂಗೋಪನೆಗೆ ಸಂಬಂಧಿಸಿದ ವಿಷಯವನ್ನು 1 ರಿಂದ 12ನೇ ತರಗತಿವರೆಗಿನ ಪಠ್ಯದಲ್ಲಿ ಅಳವಡಿಸುವಂತೆ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಶಿಕ್ಷಣ ಇಲಾಖೆಗೆ ಪತ್ರವನ್ನು ಬರೆದಿದ್ದಾರೆ.

ವಿದ್ಯಾರ್ಥಿಗಳಿಗೆ ಸಾಮಾಜಿಕ ಪರಿಸರ ಅಧ್ಯಯನದ ಭಾಗವಾಗಿ ಭಾರತೀಯ ಗೋವುಗಳ ಜತೆಗಿರುವ ಮಾನವ ಸಂಬಂಧ ಹಾಗೂ ಜೈವಿಕ ವೈವಿಧ್ಯತೆ ಪರಿಸರ ಅವಲಂಬನೆ ಪರಿಸರ ಸಂರಕ್ಷಣೆ ಕುರಿತು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ತಿಳಿ ಹೇಳುವ ಕೆಲಸವಾಗಬೇಕಾಗಿದೆ.ಭಾರತೀಯ ಗೋವುಗಳು ಹಾಗೂ ಪಶುಸಂಗೋಪನೆಗೆ ಸಂಬಂಧಿಸಿದಂತೆ 1ನೇ ತರಗತಿಯಿಂದ 12ನೇ ತರಗತಿಯವರೆಗೆ ಪಠ್ಯ ಅಳವಡಿಸಿದಲ್ಲಿ ಮಕ್ಕಳಲ್ಲಿ ಗೋವುಗಳ ಬಗ್ಗೆ ಅರಿವು ಮೂಡಿಸಲು ಸಹಾಯವಾಗುತ್ತದೆ ಎನ್ನುವ ಉದ್ದೇಶದಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆಯಲಾಗಿದೆ ಎಂದರು

ಶಿಕ್ಷಣ ಸಚಿವರೊಂದಿಗೆ ಇದನ್ನು ಚರ್ಚಿಸಿ ಗೋವು ಗಳ ಬಗ್ಗೆ ಪಠ್ಯ ಅಳವಡಿಸಲು ಕೋರಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗೋವಿನ ಉತ್ಪನ್ನಗಳು ನಮ್ಮ ನಿತ್ಯದ ಜೀವನದ ಅವಿಭಾಜ್ಯ ಅಂಗವಾಗಿವೆ. ಪಾರಂಪರಿಕವಾಗಿ ಗೋ ಮೂತ್ರ, ಸಗಣಿ ಸಹ ಔಷಧ ರೂಪದಲ್ಲಿ ಬಳಕೆಯಾ ಗುತ್ತಿರುವುದಲ್ಲದೇ ಅನೇಕ ಕಾಯಿಲೆಗಳು ಪಂಚಗ ವ್ಯದಂತಹ ವಿಶಿಷ್ಟ ಸಂಯೋಜನೆಯಿಂದ ಗುಣಮು ಖವಾದ ಉದಾಹರಣೆಗಳಿವೆ.

ಇದನ್ನೇ ಆಧಾರವಾಗಿ ಟ್ಟುಕೊಂಡು ಗೋ ಉತ್ಪನ್ನ ಗಳಿಂದ ಔಷಧ ತಯಾರಿಸಿ ಮಾನವರ ಚಿಕಿತ್ಸೆಗೆ ಬಳಸಿಕೊಳ್ಳುವ ಸಾಧ್ಯತೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅನುಮತಿ ಕೋರಲಾಗಿದೆ ಎಂದಿದ್ದಾರೆ.

ಗೋಶಾಲೆಯ ಚಟುವಟಿಕೆಗಳನ್ನು ಕೃಷಿ ಚಟುವಟಿಕೆ ಎಂದು ಪರಿಗಣಿಸಿ ವಿದ್ಯುತ್‌ ಬಿಲ್‌ ಪಾವತಿಗೆ ವಿನಾಯಿತಿ ಅಥವಾ ಸಬ್ಸಿಡಿ ನೀಡುವಂತೆ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆಯಲಾಗಿದೆ ಎಂದೂ ಸಚಿವರು ಇದೇ ವೇಳೆ ಮಾಹಿತಿ ನೀಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.