This is the title of the web page
This is the title of the web page

Live Stream

September 2023
T F S S M T W
 123456
78910111213
14151617181920
21222324252627
282930  

| Latest Version 8.0.1 |

State Newsಧಾರವಾಡ

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸಂತೋಷ ಲಾಡ್ – ಕ್ಷೇತ್ರದ ತುಂಬೆಲ್ಲಾ ಮಿಂಚಿನ ಸಂಚಾರ ಅಧಿಕಾರಿಗಳಿಗೆ ಖಡಕ್ ಸೂಚನೆ…..


ಧಾರವಾಡ

ಕಂಬಾರಗಣವಿ ಸಂಪರ್ಕ ಹೊಸ ಸೇತುವೆ ನಿರ್ಮಾಣಕ್ಕೆ ಕಾರ್ಯಾದೇಶ ಜಿಲ್ಲೆಯ ಎಲ್ಲಾ ಶಾಲೆ, ಅಂಗನವಾಡಿ ಕಟ್ಟಡಗಳ ಪರಿಶೀಲನೆ, ದುರಸ್ತಿಗೆ ಕ್ರಮ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

ಹೌದು ಪ್ರತಿ ವರ್ಷ ಮಳೆಗಾಲದಲ್ಲಿ ಅಳ್ನಾವರ ತಾಲೂಕಿನ ಕಂಬಾರಗಣವಿ ಸಂಪರ್ಕದ ಸೇತುವೆ ನೀರಿನಿಂದ ಮುಚ್ಚಿ ಗ್ರಾಮಸ್ಥರಿಗೆ ತೊಂದರೆ ಆಗುತ್ತಿದೆ ಇದರ ಪರಿಹಾರಕ್ಕಾಗಿ 1.5 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.

ಅಳ್ನಾವರ ತಾಲೂಕಿನ ಕಂಬಾರಗಣವಿ ಗ್ರಾಮದ ಸಂಪರ್ಕ ಸೇತುವೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಕಂಬಾರಗಣವಿ ಗ್ರಾಮವು ಅರಣ್ಯ ಪ್ರದೇಶದಲ್ಲಿ ಇರುವ ಗ್ರಾಮವಾಗಿದ್ದು ನಿರಂತರ ವಾಗಿ ಮಳೆ ಆದರೆ ಸುತ್ತಲಿನ ಮಳೆ ನೀರು ಇದೇ ಸೇತುವೆ ಮೂಲಕ ಹೋಗುತ್ತದೆ.

ಈ ಸೇತುವೆಯನ್ನು ಸುಮಾರು 5 ಮೀಟರ್ ಎತ್ತರಕ್ಕೆ ನಿರ್ಮಿಸಲು ಆದೇಶಿಸಲಾಗಿದೆ 30 ಮೀಟರ್ ಉದ್ದದ ಮತ್ತು 5 ಮೀಟರ್ ಅಗಲದ ಸೇತುವೆ ನಿರ್ಮಾಣಕ್ಕೆ ಕ್ರಮ ವಹಿಸಿದ್ದು ಸ್ವಲ್ಪ ಮಳೆ ಕಡಿಮೆ ಆದ ತಕ್ಷಣ ಕಾಮಗಾರಿ ಆರಂಭಿ ಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಕಾಮಗಾರಿ ಆರಂಭಿಸುವವರೆಗೆ ಸೇತುವೆ ಬಗ್ಗೆ ನಿಗಾವಹಿಸಿ ಅತಿ ನೀರು ಹರಿದು ಬಂದು ರಸ್ತೆ ಬಂದ ಆದರೆ ತಕ್ಷಣ ಸೇತುವೆಗೆ ಸಿಲುಕಿದ ಕಟ್ಟಿಗೆ, ಕಸ,ಕಡ್ಡಿಗಳನ್ನು ತೆಗೆದು ಗ್ರಾಮಸ್ಥರ ಸಂಚಾರಕ್ಕೆ ಅವಕಾಶ ಮಾಡಲು ಅಧಿಕಾರಿಗಳಿಗೆ ಸೂಚಿಸಲಾ ಗಿದೆ ಎಂದರು.

ಜಿಲ್ಲೆಯ 62 ಅಂಗನವಾಡಿಗಳ ದುರಸ್ತಿ ನೂತನ ಕಟ್ಟಡಕ್ಕೆ ಕ್ರಮ ಕುಂಬಾರಗಣವಿ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರಕ್ಕೆ ಕಳೆದ ವರ್ಷ ನೂತನ ಕಟ್ಟಡ ನೀಡಲಾಗಿದೆ.ಕಟ್ಟಡದ ಸುತ್ತ ಮಳೆ ನೀರು ಸಂಗ್ರಹ ವಾಗುತ್ತಿದ್ದು ಇದ್ದನ್ನು ತೆರವುಗೊಳಿಸಿ ಕಟ್ಟಡದ ಸುತ್ತ ಆವರಣ ಗೊಡೆ ನಿರ್ಮಿಸಲು ನೂತನ ಕಾಮಗಾರಿ ಕೈಗೊಳ್ಳಲು ಕಾರ್ಯಾದೇಶ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಎಲ್ಲ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ಸಾಮಥ್ರ್ಯ ಹಾಗೂ ಬಳಸಲು ಯೋಗ್ಯವಿರುವ ಬಗ್ಗೆ ಲೋಕೋಪಯೋಗಿ ಇಲಾಖೆಯಿಂದ ಸಮೀಕ್ಷೆ ಮಾಡಲಾಗಿದೆ. ಜಿಲ್ಲೆ ಯಲ್ಲಿ ಶಿಥಿಲಗೊಂಡ 62 ಅಂಗನವಾಡಿ ಕಟ್ಟಡಗ ಳನ್ನು ಗುರುತಿಸಲಾಗಿದೆ

ಇವುಗಳಲ್ಲಿ 19 ಕಟ್ಟಡಗಳ ದುರಸ್ತಿಗೆ ಕ್ರಮವ ಹಿಸಲಾಗಿದೆ. 32 ಹೊಸ ಕಟ್ಟಡಗಳ ನಿರ್ಮಾಣ ಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಮತ್ತು 11 ಅಂಗನವಾಡಿ ಕೇಂದ್ರಗಳಿಗೆ ನೂತನ ಕಟ್ಟಡ ನಿರ್ಮಿಸುವ ಕಾಮಗಾರಿ ಆರಂಭವಾಗಿದೆ ಎಂದು ಸಚಿವರು ಹೇಳಿದರು.

ಅಪಾಯದ ಸ್ಥಿತಿಯಲ್ಲಿರುವ ಅಂಗನವಾಡಿ ಕಟ್ಟಡಗಳ ಬದಲಿಗೆ ಬೇರೆ ಕಟ್ಟಡಗಳಲ್ಲಿ ಮಕ್ಕಳ ಕಲಿಕೆಗೆ ಅವಕಾಶ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದು ಅದರಂತೆ ಕ್ರಮವಹಿಸಿ ವರದಿ ನೀಡಿದ್ದಾರೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಯ 136 ಶಾಲೆಗಳ 1135 ಕೊಠಡಿಗಳ ದುರಸ್ತಿಗೆ ಕ್ರಮ ಜಿಲ್ಲೆಯಲ್ಲಿ ಒಟ್ಟು 763 ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ 111 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಇವುಗಳ ಪೈಕಿ 126 ಪ್ರಾಥಮಿಕ ಹಾಗೂ 10 ಪ್ರೌಢಶಾಲೆಗಳ ಸುಮಾರು 1135 ಕೊಠಡಿಗಳನ್ನು ದುರಸ್ತಿ ಹಾಗೂ ಕೆಲವು ಕೊಠ ಡಿಗಳ ಪುನರ್ ನಿರ್ಮಾಣಕ್ಕೆ ಕ್ರಮಕೈಗೊಳ್ಳ ಲಾಗಿದೆ ಎಂದು ಸಚಿವರು ತಿಳಿಸಿದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರವು ನೀಡಿರುವ ರೂ.30 ಲಕ್ಷಗಳ ಅನುದನವನ್ನು ಉಪಯೋಗಿಸಿಕೊಂಡು 64 ಶಾಲೆಗಳ 177 ಕೊಠಡಿಗಳ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಮತ್ತು ಎನ್‍ಡಿಆರ್‍ಎಫ್ ಅಡಿಯಲ್ಲಿ ಬಿಡುಗಡೆ ಯಾದ ಅನುದಾನದಲ್ಲಿ 261 ಶಾಲೆಗಳ 724 ಕೊಠಡಿಗಳ ದುರಸ್ತಿಗೆ ಕ್ರಮಕೈಗೊಂಡಿದ್ದು ಕಾಮ ಗಾರಿ ಪ್ರಗತಿಯಲ್ಲಿದೆ.

ಶಿಥಿಲ ಕಟ್ಟಡದ ಕಾಮಗಾರಿಗಳ ಪ್ರಗತಿ ಕುರಿತು ಪರಿಶೀಲಿಸಿ ಕ್ರಮವಹಿಸಲು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.ಅಳ್ನಾವರ ತಾಲೂಕಿನ ಶಿವನಗರ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ ಹಾಗೂ ರಸ್ತೆ ನಿರ್ಮಾಣದ ಕುರಿತು ಅರಣ್ಯ ಇಲಾಖೆಯೊಂದಿಗೆ ಚರ್ಚಿಸಿದ್ದು ಶೀಘ್ರದಲ್ಲಿ ಈ ಕುರಿತ ಸಮಸ್ಯೆ ಬಗೆ ಹರಿಸುವ ದಗಿ ಸಚಿವರು ಹೇಳಿದರು.

ಧಾರವಾಡ ನಗರದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಕಟ್ಟಡ ಸೊರಿಕೆ ಬಗ್ಗೆ ಪರಿಶೀಲಿಸಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

 

ಸಚಿವರ ಕಂಬಾರಗಣವಿ ಗ್ರಾಮದ ಸೇತುವೆ ಪರಿಶೀಲನೆ ಹಾಗೂ ಗ್ರಾಮ ಭೇಟಿ ಸಂದರ್ಭದಲ್ಲಿ ಅಳ್ನಾವರ ತಹಶೀಲದ್ದಾರ ಬಸವರಾಜ ಬೆಣ್ಣಿ ಶಿರೂರ, ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಸಂತೋಷ ತಳಕಲ್ಲ, ಲೋಕೋಪಯೋಗಿ ಇಲಾಖೆಯ ಕಾರ್ಯ ಪಾಲಕ ಅಭಿಯಂತರ ಪ್ರಶಾಂತ ಪಾಟೀಲ, ಸಹಾಯಕ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ ದೊಡಮನಿ,ಸಹಾಯಕ ಅಭಿಯಂತರ ಯು.ಎಂ.ಗದಗಕರ, ಅಳ್ನಾವರ ಪಿಎಸ್‍ಐ ಪ್ರವೀಣ ನೇಸರ್ಗಿ, ಹೊನ್ನಾಪುರ ಗ್ರಾಮ ಪಂಚಾಯತ ಅಧ್ಯಕ್ಷೆ ಖತ್ತುಜಾ ಮುಕ್ತುಂಸಾಭ ಡೊಣಸಾಲ್, ಉಪಾದ್ಯಕ್ಷ ಫಾರೂಕ ಅಂಬಡಗಟ್ಟಿ, ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ರೇಣುಕಾ ಕೊಪ್ಪದ, ಗ್ರಾಮ ಪಂಚಾಯತ ಸದಸ್ಯ ಲಕ್ಷ್ಮಿ ದೂಳಕುಡೆ, ಸಂಗಪ್ಪ ಹರಿಜನ, ಪತ್ತೆಸಾಭ ಹಾದಿಮನಿ ಸೇರಿದಂತೆ ಕಂಬಾರಗಣವಿ, ಹೊನ್ನಾಪುರ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ……


Suddi Sante Desk

Leave a Reply