ಬೆಂಗಳೂರು –
ಕಾರ್ಮಿಕ ಇಲಾಖೆಯ ಸಚಿವ ಸಂತೋಷ ಲಾಡ್ ಅವರು ಇಲಾಖೆಯ ಅಧಿಕಾರಿಗಳು ಮತ್ತು ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯನ್ನು ಮಾಡಿದರು ಹೌದು ಸಚಿವ ರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ನಂತರ ಸಚಿವರು ಮೊದಲ ಬಾರಿಗೆ ಸಭೆಯನ್ನು ಮಾಡಿದರು
ಬೆಂಗಳೂರಿನ ಕಾರ್ಮಿಕ ಇಲಾಖೆಯಲ್ಲಿ ಪರಿಚಯಾತ್ಮಕ ಸಭೆ ನಡೆಸಿದ ಸಚಿವರು ಇಲಾಖೆ ಕುರಿತಾದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಯನ್ನು ಪಡೆದುಕೊಂಡು ಹಲವಾರು ವಿಚಾರ ಗಳ ಚರ್ಚೆ ಯನ್ನು ಮಾಡಿದರು.
ಸಭೆಯಲ್ಲಿ ಇಲಾಖಾ ಕಾರ್ಯದರ್ಶಿ ಎನ್ ವಿ ಪ್ರಸಾದ್, ಕಾರ್ಮಿಕ ಆಯುಕ್ತ ಅಕ್ರಂ ಪಾಷ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..