ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರ ಕನಸಿನ ಲಕ್ಷ ವೃಕ್ಷಗಳನ್ನು ನೆಡುವ ಕಾರ್ಯಕ್ರಮಕ್ಕೆ ಹುಬ್ಬಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಚಾಲನೆ ನೀಡಿದರು ನಗರದ ಗೋಕುಲ ರಸ್ತೆಯ ಕೋಟಿಲಿಂಗ ನಗರದ ಮಲ್ಲಿಕಾರ್ಜುನ ಉದ್ಯಾನವನದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಆಯೋ ಜಿಸಿದ್ದ ಲಕ್ಷ ವೃಕ್ಷಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ನಂತರ ಮಾತನಾಡಿದ ಅವರು, 1 ಲಕ್ಷ ಸಸಿ ನೆಡುವ ಬೃಹತ್ ಕಾರ್ಯಕ್ರಮ ಇದಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು. ಪರಿಸರ ಸಂರಕ್ಷಣೆಗೆ ಮುಂದಾಗಬೇಕಿದೆ ಎಂದರು.
ಶಾಸಕರಾದ ಮಹೇಶ ಟೆಂಗಿನಕಾಯಿ ಮಾತನಾಡಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಸುಮಾರು 579 ಉದ್ಯಾನಗಳಲ್ಲಿ 1 ಲಕ್ಷ ವೃಕ್ಷಗಳನ್ನು ನೆಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾ ಯಿತು. ಸಾರ್ವಜನಿಕರು ಕೂಡ ಮಹಾನಗರ ಪಾಲಿಕೆ ಯೊಂದಿಗೆ ಕೈ ಜೋಡಿಸುವ ಮೂಲಕ ವೃಕ್ಷಗಳನ್ನು ಸಂರಕ್ಷಣೆ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ. ಆರ್.ಜೆ., ಮಹಾಪೌರರಾದ ರಾಮಣ್ಣ ಬಡಿಗೇರ, ಉಪ ಮಹಾಪೌರರಾದ ದುರ್ಗಮ್ಮ ಶಶಿಕಾಂತ ಬಿಜವಾಡ, ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ, ಸದಸ್ಯರಾದ ಚೇತನ ಹಿರೇಕೆರೂರ, ನಾಗರಾಜ ಗೌರಿ, ಪ್ರೇಮನಾಥ ಚಿಕ್ಕತುಂಬಳ, ಮಾಜಿ ಮಹಾಪೌರರಾದ ಪ್ರಕಾಶ ಕ್ಯಾರಕಟ್ಟಿ, ಪಾಲಿಕೆ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ……