ಸಚಿವ ಶಂಕರ ಪಾಟೀಲ ಮುನೇನಕೊಪ್ಪ ರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ ಶೀಘ್ರವಾಗಿ ಮುಗಿಸಲು ಸೂಚನೆ

Suddi Sante Desk

ಹುಬ್ಬಳ್ಳಿ –

ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಯನ್ನು ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ವೀಕ್ಷಣೆ ಮಾಡಿ ಪರಿಶೀಲನೆ ನಡೆಸಿದರು.

ಹೌದು ಹುಬ್ಬಳ್ಳಿ ನಗರದ ಪ್ರಮುಖ ರಸ್ತೆಯಾದ ರೈಲ್ವೇ ಸ್ಟೇಶನ್ ರಸ್ತೆಯಲ್ಲಿನ ಒಳಚರಂಡಿ ಸೇರಿದಂತೆ ಇನ್ನಿತರ ಅಭಿವೃದ್ಧಿಯ ಕಾಮಗಾರಿಗಳನ್ನು ಪರಿಶೀಲಿಸಲಾಯಿತು. ಸದರಿ ಕಾಮಗಾರಿಯ ಪ್ರಗತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣ ಗೊಳಿಸಲು ಸೂಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.