ಬೆಂಗಳೂರು –
ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿ ಸಿದಂತೆ ತಮ್ಮ ಹೇಳಿಕೆ ವಿವಾದ ಕ್ಕೀಡಾಗುತ್ತಿದ್ದಂತೆ ಎಚ್ಚೆತ್ತ ಸಚಿವ ಉಮೇಶ್ ಕತ್ತಿ, ಸ್ಪಷ್ಟನೆ ನೀಡಿದ್ದು, ಬಿಪಿಎಲ್ ಕಾರ್ಡ್ ನ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ ಸಚಿವರು

ಟಿವಿ, ಫ್ರಿಡ್ಜ್, ಬೈಕ್ ಇರುವವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಬೇಕು ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದರು. ಸಚಿವರ ಹೇಳಿಕೆಗೆ ಸ್ವ ಪಕ್ಷೀಯ ನಾಯಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ರಾಜ್ಯಾದ್ಯಂತ ಸಾರ್ವಜನಿಕರು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ. ಮುಂದೆಯೂ ಯಾವುದೇ ತಿದ್ದುಪಡಿ ಮಾಡುವುದಿಲ್ಲ. ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಈಗಿರುವ ಮಾನದಂಡಗಳೇ ಮುಂದುವರೆಯಲಿವೆ ಎಂದು ಹೇಳಿದ್ದಾರೆ.