ಅಮ್ಮಿನಬಾವಿ –
ಇಂದು ಅಮ್ಮಿನಭಾವಿ ಗ್ರಾಮದಲ್ಲಿ ಶ್ರೀ ಶಾಂತೇಶ್ವರ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲಾ ಕಟ್ಟಡವನ್ನು ಗ್ರಾಮದ ಪಂಚ ಗ್ರಹ ಹಿರೇಮಠದ ಶ್ರೀ ಷ. ಬ್ರ.ಅಭಿನವ ಶಾಂತಲಿಂಗ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ಜನಪ್ರಿಯ ಶಾಸಕರಾದ ಅಮೃತ ದೇಸಾಯಿ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಶಾಲೆಯನ್ನು ಶಾಕರು ವೀಕ್ಷಣೆ ಮಾಡಿ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು

ಶಾಂತೇಶ್ವರ ಪ್ರೌಢ ಶಾಲೆಯ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಶಾಲೆಯ ಎಲ್ಲ ಆಡಳಿತ ಮಂಡಳಿಯ ಸದಸ್ಯರು ಗ್ರಾಮ ಪಂಚಾಯತಿಯ ಸದಸ್ಯರು ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಗ್ರಾಮದ ಯುವ ಮಿತ್ರರು ಭಾಗವಹಿಸಿದರು.
