ಹುಬ್ಬಳ್ಳಿ –
ಇತ್ತೀಚಿಗೆ ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ ಬೆಲ್ಲದ ಪರಿಹಾರದ ಚೆಕ್ ಗಳನ್ನು ವಿತರಣೆ ಮಾಡಿದರು.ಹೌದು ಅವಘಡದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ಒಂದು ಅವಘಡ ಸಂಭವಿಸಿತ್ತು
ತಾರಿಹಾಳ ಕೈಗಾರಿಕಾ ಪ್ರದೇಶ ದಲ್ಲಿ ಜುಲೈ 23 ರಂದು ಮೇಣದಬತ್ತಿ ಸ್ಪಾರ್ಕರ್ ತಯಾರಿಕಾ ಘಟಕದಲ್ಲಿ ಆಗಿರುವ ಅಗ್ನಿ ಅವಘಡದಲ್ಲಿ ಮೃತಪಟ್ಟ ದಿ. ಗೌರಮ್ಮ ಕೋಂ ವೀರಭದ್ರಯ್ಯ ಹಿರೇಮಠ ಹಾಗೂ ದಿ. ಚನ್ನವ್ವ ಕೋಂ ಮಂಜುನಾಥ ಅರಿವಾಳ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ಐದು ಲಕ್ಷ ರೂಪಾಯಿಗಳ ಪರಿಹಾರ ಧನದ ಚೆಕ್ ಅನ್ನು ವಿತರಿಸಲಾಯಿತು.
ಗೃಹ ಕಚೇರಿಯಲ್ಲಿ ಮೃತರ ಕುಟುಂಬಸ್ಥರಿಗೆ ಈ ಒಂದು ಪರಿಹಾರದ ಚೆಕ್ ಗಳನ್ನು ನೀಡಲಾಯಿತು.ಇನ್ನೂ ಇದೇ ವೇಳೆ ಆಸರೆಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಶೇಷ ಕೃತಜ್ಞತೆಗಳನ್ನು ಶಾಸಕ ಅರವಿಂದ ಬೆಲ್ಲದ ಸಲ್ಲಿಸಿದರು. ಇನ್ನೂ ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ್ ನಾಶಿ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.