ಬೆಂಗಳೂರು –
ಹೌದು ಭಾರತೀಯ ಜನತಾ ಪಾರ್ಟಿಯ ಕೇಂದ್ರೀಯ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯ ನೂತನ ಸದಸ್ಯರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇಮಕಗೊಂಡ ಹಿನ್ನಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು.
ಬೆಂಗಳೂರಿನಲ್ಲಿ ಅವರ ನಿವಾಸಕ್ಕೆ ಶಾಸಕರು ಆಗಮಿಸಿ ಮಾಜಿ ಮುಖ್ಯಮಂತ್ರಿಗ ಳಾದ ಬಿ. ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಶುಭಾಶಯ ಕೋರಿ ಅಭಿನಂದಿಸಿ ದರು.ಈ ಒಂದು ಸಂದರ್ಭದಲ್ಲಿ ಶಾಸಕರೊಂದಿಗೆ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಿ.ಎನ್. ಜೀವರಾಜ ಅವರು ಉಪಸ್ಥಿತರಿದ್ದರು.