ಬೆಂಗಳೂರು –
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರ ಕುರಿತು ಬೆಂಗಳೂರಿನಲ್ಲಿ ನಡೆಯುತ್ತಿರುವ ಪರಮಪೂಜ್ಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಬೆಂಬಲ ನೀಡಿದರು.

ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ನೀಡಬೇಕೆಂದು ಫ್ರೀಡಂ ಪಾರ್ಕ್ ನಲ್ಲಿ ನಡೆಸುತ್ತಿರುವ ಆಮರಣಾಂತ ಹೋರಾಟದಲ್ಲಿ ಪಾಲ್ಗೊಂಡು ಶ್ರೀಗಳಿಗೆ ಬೆಂಬಲ ಸೂಚಿಸಿದರು

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕರಾದ ವಿಜಯಾನಂದ ಕಾಶಪ್ಪನವರ ಸೇರಿದಂತೆ ಸಮಾಜದ ಇನ್ನಿತರ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು
