ಬೆಂಗಳೂರು –
ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಎರಡು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.ಬೆಳಗಾವಿಯ ಸದಾಶಿವನಗರದಲ್ಲಿ ಇರುವ ಮನೆಗೆ ಭೇಟಿ ನೀಡಿದ ಆರ್ ಎಸ್ ಎಸ್ ನ ತಂಡಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸೋದರ ಚನ್ನರಾಜ ಹಟ್ಟಿಹೊಳಿ ಅವರು ಚೆಕ್ ಹಸ್ತಾಂತರ ಮಾಡಿದರು.
ರಾಮ ಮಂದಿರಕ್ಕೆ ದೇಣಿಗೆ ನೀಡಿದ ಮೊದಲ ಕಾಂಗ್ರೆಸ್ ನಾಯಕಿ ಇವರಾಗಿದ್ದಾರೆ.ದೇಶಾದ್ಯಂತ ಶ್ರೀ ರಾಮ ಮಂದಿರ ನಿರ್ಮಾಣಕ್ಕೊಸ್ಕರ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಎನ್ನುವ ಹೆಸರಿನಲ್ಲಿ ನಿಧಿ ಸಂಗ್ರಹಣ ಟ್ರಸ್ಟ್ ಸ್ಥಾಪನೆಯಾಗಿದೆ.ಇವತ್ತು ಈ ಟ್ರಸ್ಟಿಗೆ ಎರಡು ಲಕ್ಷ ರೂಪಾಯಿಗಳ ಚೆಕ್ ನ್ನು ಅದರ ಪದಾಧಿಕಾರಿಗಳಿಗೆ ಶಾಸಕಿಯವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಹೋದರ ಚನ್ನರಾಜ ಹಟ್ಟಿಹೊಳಿ, ವಿದ್ಯಾಭಾರತಿ ಕರ್ನಾಟಕ ಪ್ರಾಂತ ಅಧ್ಯಕ್ಷ ಪರಮೇಶ್ವರ ಹೆಗಡೆ, ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್, ಜಿಲ್ಲಾ ವ್ಯವಸ್ಥಾಪಕ ಪ್ರಮುಖ ವಿಶಾಲ ಖಂಡಾಗಳೆ, ನಗರ ಸಹಸೇವಾ ಪ್ರಮುಖ ದಿನೇಶ್ ಪಾಟೀಲ, ನಗರ ಸಂಪರ್ಕ ಪ್ರಮುಖ ಗುರುದತ್ತ ಕುಲಕರ್ಣಿ, ವಿನೋದ ಶಾನಭಾಗ ಹಾಗೂ ಮುಂತಾದವರು ಉಪಸ್ಥಿತರಿದ್ದರು.