ಹುಬ್ಬಳ್ಳಿ –
ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಪಡೆದ ಭಾರತ ತಂಡಕ್ಕೆ ಶುಭಹಾರೈಸಿದ ಶಾಸಕ ಪ್ರಸಾದ್ ಅಬ್ಬಯ್ಯ – ಸ್ಪೇನ್ ತಂಡದ ವಿರುದ್ದ ಜಯಶಾಲಿ ಯಾದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಅಭಿನಂದನೆ ತಿಳಿಸಿದ ಶಾಸಕರು…..
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡವು ಕಂಚಿನ ಪದಕವನ್ನು ಪಡೆದುಕೊಂಡಿದೆ.ಹೌದು ಭಾರತ ಮತ್ತು ಸ್ಪೇನ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಭಾರತ ತಂಡವು ಸ್ಪೇನ್ ತಂಡ ವನ್ನು ಮಣಿಸುವ ಮೂಲಕ ಕಂಚಿನ ಪದಕವನ್ನು ಗೆದ್ದು ದೇಶಕ್ಕೆ ಮತ್ತೊಂದು ಪದಕವನ್ನು ಹಾಕಿ ತಂಡವು ತಂದುಕೊಟ್ಟಿದೆ.
ಇನ್ನೂ ಒಲಿಪಿಂಕ್ಸ್ ನಲ್ಲಿ ಐತಿಹಾಸಿಕ ಸಾಧನೆ ಯನ್ನು ಮಾಡಿದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದ ಶಾಸಕರು ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ರಾಗಿರುವ ಪ್ರಸಾದ ಅಬ್ಬಯ್ಯ ಅವರು ಭಾರತದ ಹಾಕಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ನಿಮ್ಮ ಪ್ರದರ್ಶನವು ಶ್ಲಾಘನೀಯವಾಗಿದೆ ಎಂದು ಬಣ್ಣಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..