ಧಾರವಾಡ ಜಿಲ್ಲಾ ಬ್ರಾಹ್ಮಣ ಸೇವಾ ಸಂಘದ ಕಾರ್ಯಕ್ರಮ ದಲ್ಲಿ ಭಾಗಿಯಾದ ಶಾಸಕ ಪ್ರಸಾದ ಅಬ್ಬಯ್ಯ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಸನ್ಮಾನ ಸಮಾರಂಭ…..

Suddi Sante Desk

ಹುಬ್ಬಳ್ಳಿ

ಸಾಕ್ಷರತೆಯನ್ನು ಆಧರಿಸಿ ಯಾವುದೇ ಸಮುದಾಯದ ಅಥವಾ ದೇಶದ ಪ್ರಗತಿಯನ್ನು ಅಳೆಯಬಹುದು. ಹಾಗಾಗಿ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ‌ ಪ್ರಸಾದ ಅಬ್ಬಯ್ಯ ಹೇಳಿದರು.ನಗರದ ಸ್ಟೇಷನ್ ರಸ್ತೆಯಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಧಾರವಾಡ ಜಿಲ್ಲಾ ಬ್ರಾಹ್ಮಣ ಸೇವಾ ಸಂಘ ಮತ್ತು ಈಶ್ವರ ದೇವಸ್ಥಾನದ ಟ್ರಸ್ಟ್ ಸಹಯೋಗದಲ್ಲಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು

.

ಜನರ ಮತ್ತು ಸಮಾಜದ ಪರವಾಗಿ ಬ್ರಾಹ್ಮಣ ಸೇವಾ ಸಂಘ ಕೆಲಸ ಮಾಡಿಕೊಂಡು ಬರುತ್ತಿದೆ.ಸಮುದಾಯದ ಹಲವರು ತಮ್ಮ ಸಮಾಜದ ಋಣ ತೀರಿಸುವ ಕೆಲಸ ಮಾಡುತ್ತಿದ್ದಾರೆ.ಇದು‌ ಹೀಗೆಯೇ ಮುಂದುವರಿಯಬೇಕು ಎಂದರು.ಶಿಕ್ಷಣ ಮತ್ತೆ ಆರೋಗ್ಯ ಸರ್ಕಾರದ ಕೈಯಲ್ಲಿರ ಬೇಕು ಎಂದು ಡಾ.ಬಿ.ಆರ್. ಅಂಬೇಡ್ಕರ್ ಬಯಸಿದ್ದರು. ಆದರೆಇಂದು ಎರಡೂ ಖಾಸಗೀಕರಣಕ್ಕೆ ತೆರೆದುಕೊಂಡಿವೆ. ಇದರಿಂದಾಗಿ,ಬಡವರಿಗೆ ಸುಲಭವಾಗಿ ಕೈಗೆಟುಕುವ ಸ್ಥಿತಿಯಲ್ಲಿ ಎರಡೂ ಕ್ಷೇತ್ರಗಳು ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ವಸಂತ ನಾಡಜೋಶಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ರಾಜಾ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು.ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕ ವಸಂತ ನಾಡಜೋಶಿ ಪ್ರಾಸ್ತಾವಿಕವಾಗಿ ಮಾತನಾಡಿದರು.ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ರಾಜಾ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು.

ಮಹಾನಗರ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ, ಸಂಘದ ಅಧ್ಯಕ್ಷ ಎಲ್.ಎ.‌ಓಕ್,ಪ್ರಧಾನ ಕಾರ್ಯದರ್ಶಿ ಮುರಳಿ ಕರ್ಜಗಿ,ಕಾರ್ಯದರ್ಶಿ ಉಮೇಶ ದುಶಿ, ಕಾರ್ಯ ದರ್ಶಿ ಖಜಾಂಚಿ ಗುರುಪ್ರಕಾಶ ಕುಲಕರ್ಣಿ, ಉಪಾಧ್ಯಕ್ಷ ರಾದ ಎನ್.ಎಚ್. ‌ಕುಲಕರ್ಣಿ, ಆಡಳಿತ ಮಂಡಳಿಯ ಸುಭಾಶ ಕುಲಕರ್ಣಿ, ಶ್ರೀಧರ ಕುಲಕರ್ಣಿ, ನಾರಾಯಣ ಪಾಂಡುರಂಗಿ ಇದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.