ಹುಬ್ಬಳ್ಳಿ –
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿನ ಗುತ್ತಿಗೆಯ ಆಧಾರದ ಮೇಲಿರುವ ಆಟೋ ಟಿಪ್ಪರ್ ಚಾಲಕರನ್ನು ಮರ ನೇಮಕಾತಿ ಮಾಡಿಕೊಳ್ಳುವ ವಿಚಾರ ವಿಚಾರ ಕುರಿತಂತೆ ಹುಬ್ಬಳ್ಳಿಯಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಅವರು ಸಭೆ ಮಾಡಿದರು.ಕಳೆದ 5 ತಿಂಗಳಿನಿಂದ ಪಾಲಿಕೆಯಿಂದ ಹೊರಗುಳಿದಿರುವ 52 ಆಟೋ ಟಿಪ್ಪರ್ ಚಾಲಕರನ್ನು ಮರು ನೇಮಕ ಮಾಡಿಕೊಳ್ಳುವ ಸಲುವಾಗಿ ಶಾಸಕ ಪ್ರಸಾದ ಅಬ್ಬಯ್ಯ ಅವರು ಹುಬ್ಬಳ್ಳಿಯಲ್ಲಿ ಪಾಲಿಕೆ ಆಯುಕ್ತರೊಂದಿಗೆ ಸಭೆ ನಡೆಸಿದರು.
ಪಾಲಿಕೆ ಆವರಣದಲ್ಲಿನ ಶಾಸಕರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, ಕಳೆದ 5 ತಿಂಗಳಿನಿಂದ ಕೆಲಸವಿಲ್ಲದೇ ಪರದಾಡುತ್ತಿರುವ ಆಟೋ ಟಿಪ್ಪರ್ ಚಾಲಕರ ಮರು ನೇಮಕಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಅವರೊಂದಿಗೂ ಸುಧೀರ್ಘವಾಗಿ ಚರ್ಚಿಸಿದ್ದು, ಅವರೂ ಸಹ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ.
ಆಟೋ ಚಾಲಕರ ಕುಟುಂಬಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಿದರು.ಈ ಬಗ್ಗೆ ಪರಿಶೀಲಿಸಿ ಶೀಘ್ರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಪಾಲಿಕೆ ಆಯುಕ್ತರು ಸಭೆಗೆ ತಿಳಿಸಿದರು. ಆಟೋ ಟಿಪ್ಪರ್ ಚಾಲಕರು ಸಭೆಯಲ್ಲಿ ಉಪಸ್ಥಿತರಿದ್ದರು.