ಬೆಂಗಳೂರು –
ಮೇ 16 ರಂದು ರಾಜ್ಯದಲ್ಲಿ ಶಾಲೆ ಆರಂಭವಾಗಲಿವೆ ಇನ್ನೂ ಶಾಲೆಗಳು ಆರಂಭಕ್ಕೂ ಮುನ್ನ ದಿನವೇ ಸಂಪೂರ್ಣ ಶಾಲಾ ಸ್ವಚ್ಛತೆ ಮಾಡಿಸಿ,ಮಕ್ಕಳನ್ನು ಬರಮಾ ಡಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಿಬ್ಬಂದಿ ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.ಮೊದಲ ದಿನ ಮೇ 16 ರಿಂದಲೇ ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟ ಆರಂಭಿಸಬೇಕು. ಹಾಗಾಗಿ,ಶಿಕ್ಷಕರು ಸೇರಿದಂತೆ ಇತರೆ ಸಿಬ್ಬಂದಿ 15 ರಂದು ಶಾಲಾ ಸ್ವಚ್ಛತೆ,ಸುರಕ್ಷತೆ ಪರಿಶೀಲನೆ,ಪೂರ್ವಭಾವಿ ಸಭೆ, ತರಬೇತಿ,ಸೇರಿದಂತೆ ಹಲವಾರು ಕೆಲಸ ಕಾರ್ಯಗಳನ್ನು ಮಾಡಬೇಕು
ಸಮಾಲೋಚನಾ ಸಭೆಗಳೊಂದಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಮೇ 16 ಕ್ಕೆ ಶಾಲೆ ಪ್ರಾರಂಭೋತ್ಸವ ನಡೆಸಿ ಮಕ್ಕಳನ್ನು ಸ್ವಾಗತಿಸಬೇಕು ಎಂದು ಉಲ್ಲೇಖಿಸಲಾಗಿದೆ. ಪ್ರಾರಂಭೋತ್ಸವದ ದಿನ ಶಾಲೆಯನ್ನು ತಳಿರು ತೋರಣಗ ಳಿಂದ ಸಿಂಗರಿಸಿ ಆಕರ್ಷಣಿಯಗೊಳಿಸಬೇಕು.ಮೊದಲ ದಿನ ಮಕ್ಕಳಿಗೆ ಸಿಹಿ ಊಟ ತಯಾರಿಸಿ ಬಡಿಸಬೇಕು. ಇದಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಇಲಾಖೆಯ ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು,ಉಪ ನಿರ್ದೇಶಕರು ಕೈಗೊಳ್ಳ ಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಸುತ್ತೋಲೆ ಹೊರಡಿಸಿದ್ದಾರೆ