ತುಮಕೂರು –
ಬಿಸಿಯೂಟ ಸೇವಿಸಿ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹೊನ್ನಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಗಳಿಗೆ ವಾಂತಿ ಭೇದಿ ಕಾಣಿಸಿ ಕೊಂಡು ಶುರುವಾಗಿದ್ದು ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಇನ್ನೂ ಮೊದಲಿಗೆ ಸಾಂಬಾರ್ ನಲ್ಲಿ ಹುಳುಗಳು ಕಂಡು ಬಂದಿದ್ದವು ಎನ್ನಲಾಗಿದೆ.
ಊಟ ಸೇವಿಸಿದ್ದ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋ ಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ನೇರಳೆಕೆರೆ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾ ಗುತ್ತಿದೆ.ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯ ದಿಂದ ಪಾರಾಗಿದ್ದಾರೆ.ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಶಾಲೆಯಲ್ಲಿನ ಶಿಕ್ಷಕರು ಅಸ್ವಸ್ಥಗೊಂಡ ಮಕ್ಕಳನ್ನು ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದರು.