ಮೈಸೂರು –
ಶಾಲಾ ಬಿಸಿಯೂಟ ಸೇವಿಸಿ 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ತಗೊಂಡ ಘಟನೆ ಮೈಸೂರಿ ನಲ್ಲಿ ನಡೆದಿದೆ. ಹೌದು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಸಾಲುಂಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಸಾಲುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ
ನಂಜನಗೂಡು ತಾಲ್ಲೂಕಿನ ವರುಣ ಕ್ಷೇತ್ರ ವ್ಯಾಪ್ತಿಯ ಶಾಲೆಯಲ್ಲಿ ಈ ಒಂದು ಅವಘಡ ನಡೆದಿದೆ.ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆ ಯಲ್ಲಿ ಶಾಲಾ ಮಕ್ಕಳಿಗೆ ಚಿಕಿತ್ಸೆಯನ್ನು ಶಾಲಾ ಮಕ್ಕಳು ಪಡೆದುಕೊಳ್ಳುತ್ತಿದ್ದಾರೆ
ಆಸ್ಪತ್ರೆಗಳು ಡಿಹೆಚ್ಒ ಡಾ ಕುಮಾರಸ್ವಾಮಿ, ನರಸೀಪುರ ತಹಸೀಲ್ದಾರ್ ಸುರೇಶ್ ಆಚಾರ್, ನಂಜನಗೂಡು ತಹಸೀಲ್ದಾರ್ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳ ಅರೋಗ್ಯ ವಿಚಾರಿಸಿದ ಅಧಿಕಾರಿಗಳು.
ಸಿಎಂ ಕ್ಷೇತ್ರವಾಗಿರುವ ಕಾರಣ ಗೌಪ್ಯತೆ ಕಾಪಾಡಿಕೊಳ್ಳಲು ಮುಂದಾದ ಅಧಿಕಾರಿಗಳು.
ಅಧಿಕಾರಿಗಳು ಮತ್ತು ಶಾಲೆಯ ವಿರುದ್ಧ ಗ್ರಾಮಸ್ಥರ ಆಕ್ರೋಶವನ್ನು ವ್ಯಕ್ತಪಡಿಸಿದರು.
ಸುದ್ದಿ ಸಂತೆ ನ್ಯೂಸ್ ಮೈಸೂರು…..