ಮಧ್ಯಪ್ರದೇಶ –
ಸೇತುವೆಯಿಂದ ಕಾಲುವೆಗೆ ಬಸ್ ವೊಂದು ಉರುಳಿ ಬಿದ್ದಿರುವ ಘಟನೆ ಮಧ್ಯಪ್ರದೇಶದ ರಾಜ್ಯ ರಾಜಧಾನಿ ಭೂಪಾಲ್ ನಲ್ಲಿ ನಡೆದಿದೆ. ಭೂಪಾಲ್ ನಿಂದ 560 ಕಿ.ಮೀ ದೂರದಲ್ಲಿರುವ ಸಿಧಿ ಜಿಲ್ಲೆಯಲ್ಲಿ ಬಸ್ ವೊಂದು ಸೇತುವೆಯಿಂದ ಕಾಲುವೆಗೆ ಉರುಳಿ 32 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಮುಳುಗಿದ ಶಂಕೆ ವ್ಯಕ್ತಪಡಿಸಲಾಗಿದೆ.

ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿ ಸುಮಾರು 60 ಪ್ರಯಾಣಿಕರು ಇದ್ದರಂತೆ. ಅಪಘಾತ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ಪ್ರಮುಖ ಕಾರ್ಯಕ್ರಮವೊಂದನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.ನಡೆದದ್ದು ಅತ್ಯಂತ ದುರಂತ. ರಕ್ಷಣಾ ಕಾರ್ಯ ಈಗಾಗಲೇ ನಡೆಯುತ್ತಿದೆ. ಇಬ್ಬರು ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರ ನೀಡಲಾಗು ವುದು. ಇಡೀ ರಾಜ್ಯವು ಸಂತ್ರಸ್ತರೊದಿಗೆ ನಿಂತಿದೆ’ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
‘