ಕಲಬುರಗಿ –
ಬಿಸಿಯೂಟ ಸೇವಿಸಿ 40 ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಅಸ್ವಸ್ಥ ಗೊಂಡ ಘಟನೆ ಕಲಬುರಗಿ ತಾಲೂಕಿನ ಹಾವನೂರು ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ ಎಂದಿನಂತೆ ನಿನ್ನೆ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಶಾಲೆಯ 46 ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿದ್ದಾರೆ.
46 ವಿದ್ಯಾರ್ಥಿಗಳಲ್ಲಿ 8 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಗಿದೆ.ಶಾಲೆಯಲ್ಲಿ 158 ವಿದ್ಯಾರ್ಥಿಗಳಿದ್ದು ಅದರಲ್ಲಿ 46 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಪೋಷಕರು ಮತ್ತು ಶಿಕ್ಷಕರು ತಕ್ಷಣ ಅಸ್ವಸ್ಥ ವಿದ್ಯಾರ್ಥಿ ಗಳನ್ನು ಚಿಕಿತ್ಸೆಗಾಗಿ ಗೊಬ್ಬೂರು(ಬಿ)ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು.ಮಧ್ಯಾಹ್ನದ ಬಿಸಿ ಯೂಟ ಜಿಲ್ಲಾ ಅಧಿಕಾರಿ ಭರತಜ್ ಸಾವಳಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರತ್,ತಾಲ್ಲೂಕು ಆರೋಗ್ಯಾ ಧಿಕಾರಿ ಡಾ.ರವಿಕಿರಣ್ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.