ಮತದಾರರ ಪರಿಷ್ಕರಣೆ ಕರ್ತವ್ಯಕ್ಕೆ 60 ಸಾವಿರಕ್ಕೂ ಹೆಚ್ಚು ಶಿಕ್ಷಕರು ಪಾಠನೂ ಮಾಡಬೇಕು ಅಪ್ಡೇಟ್‌ ನೂ ಮಾಡಬೇಕು ಶೈಕ್ಷಣಿಕ ಚಟುವಟಿಕೆ ಗಳಿಗೆ ಹಿನ್ನಡೆಗೆ ಯಾರು ಹೊಣೆ…..

Suddi Sante Desk
ಮತದಾರರ ಪರಿಷ್ಕರಣೆ ಕರ್ತವ್ಯಕ್ಕೆ 60 ಸಾವಿರಕ್ಕೂ ಹೆಚ್ಚು ಶಿಕ್ಷಕರು ಪಾಠನೂ ಮಾಡಬೇಕು ಅಪ್ಡೇಟ್‌ ನೂ ಮಾಡಬೇಕು   ಶೈಕ್ಷಣಿಕ ಚಟುವಟಿಕೆ ಗಳಿಗೆ ಹಿನ್ನಡೆಗೆ ಯಾರು ಹೊಣೆ…..

ಬೆಂಗಳೂರು

ಇನ್ನೇನು ಮೂರು ನಾಲ್ಕು ತಿಂಗಳು ಅಷ್ಟೇ ಚುನಾವಣೆ ಬಂದೇ ಬಿಟ್ಟಿತು ಈ ನಡುವೆ ಈಗಾಗಲೇ ರಾಜ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷದವರು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಇದರ ನಡುವೆ ರಾಜ್ಯದಲ್ಲಿ ಈಗ ಮತದಾರರ ಪಟ್ಟಿ ಪರಿಷ್ಕರಣಿಗೆ ಕಾರ್ಯ ಆರಂಭಗೊಂಡಿದ್ದು ಇದಕ್ಕಾಗಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ನಿಯೋಜನೆ ಮಾಡಲಾಗಿದೆ

ಹೌದು ಸರ್ಕಾರಿ ಪ್ರಾಥಮಿಕ ಶಾಲೆಗಳ ಸುಮಾರು 60 ಸಾವಿರಕ್ಕೂ ಅಧಿಕ ಶಿಕ್ಷಕರನ್ನು ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ನಿಯೋಜಿಸ ಲಾಗಿದೆ ಬೇರೆ ಸರ್ಕಾರಿ ನೌಕರರಿಗಿಂತ ಶಿಕ್ಷಕರನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿ ಪರಿಷ್ಕರ ಣೆಗೆ ನಿಯೋಜಿಸಲಾಗಿದ್ದು ಶಾಲಾ ಮಕ್ಕಳ ಕಲಿಕೆ, ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗಲಿದೆ ಎಂಬ ದೊಡ್ಡದೊಂದು ಆತಂಕ ಎದುರಾಗಿದೆ

ರಾಜ್ಯದಲ್ಲಿ 45 ಸಾವಿರಕ್ಕೂ ಅಧಿಕ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 30 ಲಕ್ಷಕ್ಕೂ ಅಧಿಕ ಮಕ್ಕಳಿದ್ದು ಈ ಮಕ್ಕಳಿಗೆ ಪಾಠ ಮಾಡಲು 1.56 ಲಕ್ಷ ಶಿಕ್ಷಕರಿದ್ದಾರೆ.ಇವರಲ್ಲಿ ಸುಮಾರು 60 ಸಾವಿರಕ್ಕೂ ಅಧಿಕ ಶಿಕ್ಷಕರನ್ನು ಮತದಾರರ ಪಟ್ಟಿ ಪರಿಷ್ಕರಣೆಗೆ ಬ್ಲಾಕ್ ಹಂತದ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ.

ಬೇರೆ ಸರ್ಕಾರಿ ನೌಕರರಿಗಿಂತ ಶಿಕ್ಷಕರನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ನಿಯೋಜಿಸಲಾಗಿದ್ದು ಶೈಕ್ಷಣಿಕ ಚಟುವಟಿಕೆಗಳಿಗೆ ಭಾರಿ ಹಿನ್ನಡೆಯಾಗುವ ಆತಂಕ ಕಾಡುತ್ತಿದೆ. ಶಿಕ್ಷಕರ ಕೊರತೆ ಇರುವ ಶಾಲೆಗಳಲ್ಲಿ ತೀವ್ರ ಸಮಸ್ಯೆಯಾಗಲಿದೆ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಕೇಳಿ ಬಂದಿದ್ದು ಇದನ್ನು ರಾಜ್ಯ ಸರ್ಕಾರ ಹೇಗೆ ಪರಿಗಣಿಸುತ್ತದೆ ಎಂಬೊಂದನ್ನು ಕಾದು ನೋಡಬೇಕು

ಸುದ್ದಿ ಸಂತೆ ನ್ಯೂಸ್……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.