ಬೆಂಗಳೂರು –
ಮಹಾಮಾರಿ ಕೋವಿಡ್ ಗೆ ರಾಜ್ಯದಲ್ಲಿ ಇಂದು ಕೂಡಾ ಐದಕ್ಕೂ ಹೆಚ್ಚು ಶಿಕ್ಷಕರು ಸಾವಿಗೀಡಾಗಿ ದ್ದಾರೆ. ಹೌದು ರಾಜ್ಯದ ಹಲವೆಡೆ ಕರೋನಾ ಸೋಂ ಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಕರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಹೌದು ಮುತ್ತಣ್ಣ ಕೋಟಿ ರಾಯಭಾಗದ ಸರ್ಕಾರಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕರು ಅತಿ ಚಿಕ್ಕ ವಯಸ್ಸಿನಲ್ಲಿ ಮೃತರಾಗಿದ್ದಾರೆ.ಕಳೆದ ಮೂರು ನಾಲ್ಕು ದಿನಗಳ ಹಿಂದೆ ಇವರಿಗೆ ಕರೋನಾ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಐ ಎ ಪಡೆನ್ನವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸದಾಶಿವನಗರ ಜಮಖಂಡಿ.ಇವರು ಕೂಡಾ ಕೋವಿಡ್ ನಿಂದಾಗಿ ಮೃತರಾಗಿದ್ದಾರೆ.ಇವರಿಗೆ ಕಳೆದ ನಾಲ್ಕು ದಿನಗಳ ಹಿಂದೆ ಕರೋನಾ ಸೋಂಕು ಕಾಣಿಸಿ ಕೊಂಡಿತ್ತು.ನಂತರ ಇವರು ಆಸ್ಪತ್ರೆಗೆ ದಾಖಲಾಗಿದ್ದ ರು.ಚಿಕಿತ್ಸೆ ಫಲಿಸದೇ ಇವರು ಕೂಡಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ರಾಜು ದೊಡಮನಿ ಹಿಂದಿ ಶಿಕ್ಷಕರು ವಿಜಯಪುರದ ಹಿಟ್ಟಿನಹಳ್ಳಿಎಸ್ ಎಸ್ ಸಿ ಪ್ರೌಢ ಶಾಲೆಯ ಶಿಕ್ಷಕರು ಇವರು ಕೂಡಾ ಮಹಾಮಾರಿಗೆ ಬಲಿಯಾಗಿದ್ದಾರೆ ಚಿಕ್ಕ ವಯಸ್ಸಿನ ಇವರಿಗೂ ಕೂಡಾ ಸೋಂಕು ಕಾಣಿಸಿಕೊಂಡು ನಂತರ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ.

ಶಿವಾನಂದ ಬಿ ಕಂಬಾರ ಸರ್ಕಾರಿ ಹಿರಿಯ ಪ್ರಾಥಮಿ ಕ ಶಾಲೆ ಬೆಳಗಾವಿ ಜಿಲ್ಲೆಯ ಯರಗಟ್ಟಿಯ ಬೊಳಕ ಡಬಿ ಶಾಲೆಯ ಪ್ರಧಾನ ಗುರುಗಳಾಗಿದ್ದ ಇವರಿಗೆ ಕರೋನಾ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಿಸದೇ ಇವರು ಕೂಡಾ ನಿಧನರಾಗಿದ್ದಾರೆ.

ಇನ್ನೂ ಮೃತರಾದ ಈ ಶಿಕ್ಷಕರಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕ ಬಂಧುಗಳು ಭಾವಪೂರ್ಣ ಸಂತಾಪವನ್ನು ಸೂಚಿಸಿದ್ದಾರೆ. ಹನಮಂತ ಬೂದಿ ಹಾಳ,ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ, ಎಲ್ ಐ ಲಕ್ಕಮ್ಮನವರ,ಶರಣಬಸವ ಬನ್ನಿಗೊಳ, ಸಂಗ ಮೇಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ,ಅಕ್ಬರಅಲಿ ಸೋಲಾಪೂರ, ರಾಜು ಸಿಂಗ್ ಹಲವಾಯಿ, ಚಂದ್ರಶೇಖರ ಶೆಟ್ರು,ನಾರಾಯ ಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್,ಜೆ ಟಿ ಮಂಜುಳಾ, ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂರು,ನಾಗವೇಣಿ,ಇಂದಿರಾ.ಮುಕಾಂಬಿಕಾ ಭಟ್.ನಾಗರತ್ನ,ಲಕ್ಷ್ಮೀದೇವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಅಶೋಕ ಸಜ್ಜನ, ಸೇರಿದಂತೆ ಹಲ ವರು ಸಂತಾಪವನ್ನು ಸೂಚಿಸಿದ್ದಾರೆ ಅಲ್ಲದೇ ಮೃತ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಘೋಷಣೆ ಮಾಡಿ ಸೂಕ್ತ ಪರಿಹಾರವನ್ನು ನೀಡುವಂತೆ ಒತ್ತಾಯವನ್ನು ಮಾಡಿ ದ್ದಾರೆ.