ಧಾರವಾಡ –
ಧಾರವಾಡ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಶ್ರೀಮತಿ ಗೌರಮ್ಮ ಬಲೋಗಿ – ಸೆಪ್ಬಂಬರ್ 23 ರಂದು ನಡೆಯಲಿದೆ ಪದಗ್ರಹಣ ಕಾರ್ಯಕ್ರಮ…..ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಹಲವು ಗಣ್ಯರು
ಕಾಂಗ್ರೇಸ್ ಪಕ್ಷದ ಸಂಘಟನೆ ಕಾರ್ಯಕ್ರಮಗಳಲ್ಲಿ ಸದಾ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಧಾರವಾಡದ ಶ್ರೀಮತಿ ಗೌರಮ್ಮ ಬಲೋಗಿಯವರನ್ನು ಧಾರವಾಡದ ಮಹಿಳಾ ಘಟಕದ ಜವಾಬ್ದಾರಿಯನ್ನು ನೀಡಲಾಗಿದೆ.ಇತ್ತೀಚಿಗಷ್ಟೇ ಇವರನ್ನು ಮಹಿಳಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ವನ್ನು ಮಾಡಲಾಗಿದೆ.
ಆದೇಶದ ಹಿನ್ನಲೆಯಲ್ಲಿ ಸೆಪ್ಟಂಬರ್ 23 ರಂದು ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.ಧಾರವಾಡದ ಮಾರ್ಡನ್ ಹಾಲ್ ನಲ್ಲಿ ಈ ಒಂದು ಪದಗ್ರಹಣ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಬೆಳಿಗ್ಗೆ 11 ಗಂಟೆಗೆ ವೇದಿಕೆಯ ಕಾರ್ಯಕ್ರಮ ನಡೆಯಲಿದೆ.
ಇನ್ನೂ ಈ ಒಂದು ಅಧಿಕಾರ ಸ್ವೀಕಾರ ಕಾರ್ಯಕ್ರಮ ದಲ್ಲಿ ಕಾಂಗ್ರೇಸ್ ಪಕ್ಷದ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿರುವ ಶ್ರೀಮತಿ ಸೌಮ್ಯ ರೆಡ್ಡಿಯವರು ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜಿಲ್ಲೆಯ ಪಕ್ಷದ ಎಲ್ಲಾ ಶಾಸಕರು ಮುಖಂಡರು ಸೇರಂದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಇನ್ನೂ ಈ ಒಂದು ಪದಗ್ರಹಣ ಕಾರ್ಯಕ್ರಮಕ್ಕೆ ಸರ್ವರಿಗೂ ಸ್ವಾಗತವನ್ನು ಶ್ರೀಮತಿ ಗೌರಮ್ಮ ಬಲೋಗಿಯವರು ಕೋರಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..