SSLC, PUC ಪರೀಕ್ಷೆಗೆ ಮುಹೂರ್ತ ಫಿಕ್ಸ್..!

Suddi Sante Desk

ಬೆಂಗಳೂರು –
ಕೊರೋನಾ ಭೀತಿ ನಡುವೆಯೂ 10 ಹಾಗೂ 12ನೇ ತರಗತಿ ಪ್ರಾರಂಭದ ಬೆನ್ನಲ್ಲೇ ಈಗ ಪರೀಕ್ಷೆ ದಿನಾಂಕ ಕೂಡಾ ಫಿಕ್ಸ್ ಆಗಿದೆ. ಇದೀಗ ಸಚಿವ ಸುರೇಶ್ ಕುಮಾರ್ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.ಮೇ 2ನೇ ವಾರದಲ್ಲಿ ದ್ವಿತೀಯ ಪಿಯುಸಿ ಹಾಗೂ ಜೂನ್ ಮೊದಲ ವಾರದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಠ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

1ರಿಂದ 9ನೇ ತರಗತಿಗೆ ಪಠ್ಯ ಕಡಿತವಿಲ್ಲ


ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯಮಾಪನವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಸ್ಪಷ್ಟಪಡಿಸಿದರು.

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲಾ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಸಚಿವರು ತಿಳಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.