ರಾಜ್ಯ ಬಜೆಟ್ ಗೆ ಮುಹೂರ್ತ ಫಿಕ್ಸ್ ಮಾರ್ಚ್ 8 ಬಜೆಟ್ ಮಂಡನೆ

Suddi Sante Desk

ಬೆಂಗಳೂರು –

ರಾಜ್ಯದ ಜನರು ಬಹಳ ನಿರೀಕ್ಷೆ ಇಟ್ಟುಕೊಂಡಿರುವ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿ ಯಾಗಿದೆ. ಹೌದು, ಮುಂದಿನ ತಿಂಗಳ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಇಂದಿನ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ಮುಂದಿನ ತಿಂಗಳ ಮಾರ್ಚ್ 8 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಲಿದೆ ಎಂದು ಸಂಪುಟ ಸಭೆ ಬಳಿಕ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ.

ಕಳೆದ ಒಂದು ವರ್ಷದಿಂದಲೂ ಕೊರೊನಾ ಸೋಂಕಿನಿಂದಾಗಿ ರಾಜ್ಯದ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಕಳೆದ ಮೂರು ತಿಂಗಳಿನಿಂದ ಆರ್ಥಿಕತೆ ಸ್ವಲ್ಪ ಚೇತರಿಕೆ ಹಾದಿಯಲ್ಲಿದೆ.ಹೀಗಾಗಿ ರಾಜ್ಯದ ಸದ್ಯದ ಆರ್ಥಿಕ ಸ್ಥಿತಿಗತಿಯನ್ನಾಧರಿಸಿ ಉತ್ತಮ ಬಜೆಟ್ ಮಂಡಿಸುವ ತಯಾರಿ ನಡೆಯುತ್ತಿದೆ.

ಇನ್ನೂ, ಈ ವರ್ಷದ ರಾಜ್ಯ ಸರ್ಕಾರ ಬಜೆಟ್ ಮಂಡನೆ ಬಗ್ಗೆ ರಾಜ್ಯದ ಜನರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದು, ಈ ಬಾರಿಯ ಬಜೆಟ್ ಯಾವ ಯಾವ ಕ್ಷೇತ್ರಕ್ಕೆ ಯಾವ ರೀತಿ ಲಾಭವಾಗಲಿದೆ. ಜನಸಾಮಾನ್ಯರು, ರೈತರಿಗೆ ಬಜೆಟ್ ಮಂಡನೆ ಎಷ್ಟರಮಟ್ಟಿಗೆ ಲಾಭದಾಯಕವಾಗಲಿದೆಯಾ ಇಲ್ಲವೇ ಈಗಾಗಲೇ ಬೆಲೆ ಏರಿಕೆಯಿಂದಾಗಿ ಬೇಸತ್ತಿರುವ ಜನರಿಗೆ ಮತ್ತಷ್ಟು ಹೆಚ್ಚಿನ ಹೊರೆಯಾಗುತ್ತದೆನಾ ಎಂಬುದನ್ನು ಕಾದು ನೋಡಬೇಕು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.