ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ – ಅಧಿವೇಶನ ಯಾವಾಗ ಎಷ್ಟು ದಿನ ಕಂಪ್ಲೀಟ್ ಮಾಹಿತಿ…..

Suddi Sante Desk
ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ – ಅಧಿವೇಶನ ಯಾವಾಗ ಎಷ್ಟು ದಿನ ಕಂಪ್ಲೀಟ್ ಮಾಹಿತಿ…..

ಬೆಂಗಳೂರು

ರಾಜ್ಯ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು ಆಗಸ್ಟ್.6ರಿಂದ ಆರಂಭವಾಗಲಿದೆ.ಹೌದು ರಾಜ್ಯದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್.6ರಿಂದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ ಎಂಬುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಶಿವಕುಮಾರ್ ಮಾತನಾಡಿ ಸಚಿವ ಸಂಪುಟ ಸಭೆ ಯಾವಾಗ ದೆಹಲಿಗೆ ಹೋಗುವುದು ಯಾವಾಗ ಎಂದು ಕೇಳಿದಾಗ, “ಆಗಸ್ಟ್ 6ರಿಂದ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ.

ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ” ಎಂದು ಮಾಹಿತಿ ನೀಡಿದರು.

ಕೆಪಿಎಸ್ ಸಿ ಅಧ್ಯಕ್ಷರ ಅಮಾನತ್ತಿನ ಕುರಿತು ಮಾತನಾಡಿದ ಅವರು ರಾಜ್ಯಪಾಲರು ಈ ಆದೇಶ ಮಾಡಿದ್ದಾರೆ. ಅವರ ನಂತರ ಯಾರು ಹಿರಿಯರು ಇದ್ದಾರೋ ಅವರಿಗೆ ಜವಾಬ್ದಾರಿ ನೀಡು ವಂತೆ ನಿರ್ದೇಶನ ನೀಡಿದ್ದೇನೆ” ಎಂದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.