ದೆಹಲಿ –
ದೇಶದಲ್ಲಿ ಅತಿ ಹೆಚ್ಚು ಚಿನ್ನದ ಮೇಲೆ ಸಾಲ ನೀಡುವ ಮುತ್ತೋಟು ಗ್ರೂಪ್ ನ ಮಾಲೀಕ ಎಂ ಜಿ ಜಾರ್ಜ್ ಮುತ್ತೋಟು ದೆಹಲಿಯ ತಮ್ಮ ನಿವಾಸ ದಲ್ಲಿ 4ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ.
ರಾತ್ರಿ ಮನೆಯಲ್ಲಿ ಪೂರ್ವ ದೆಹಲಿಯ ಕೈಲಾಶ್ ನಗರದ ತಮ್ಮ ನಿವಾಸದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೇಲಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ.
71 ವರ್ಷದ ಜಾರ್ಜ್ ಮುತ್ತೋಟು ಸಂಸ್ಥೆಯನ್ನು ಬೆಳೆಸುವಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತುಂಬಾ ಕಷ್ಟ ಪಟ್ಟಿದ್ದರು.ಅಲ್ಲದೇ ಪ್ರಧಾನ ಪಾತ್ರ ವಹಿಸಿದ್ದರು. ಇವರ ಶ್ರಮದಿಂದಾಗಿ ಸಂಸ್ಥೆ ದೇಶಾದ್ಯಂತ ತನ್ನ ಶಾಖೆಗಳನ್ನು ವಿಸ್ತರಿಸಿ ಹೆಮ್ಮರವಾಗಿ ಬೆಳೆದು ನಿಂತಿದೆ.