This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಯೋಗ ದಿನಾಚರಣೆ ಗೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ CM ಮಹತ್ವದ ಸಭೆ – ಸಿದ್ದತೆ ಕುರಿತು ಮಾಹಿತಿ ಪಡೆದುಕೊಂಡ ನಾಡ ದೋರೆ…..

WhatsApp Group Join Now
Telegram Group Join Now

ಮೈಸೂರು –

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ 15000 ಜನ ಭಾಗಿ ಸಿದ್ಧತೆ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ

ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು ಮೈಸೂರು ಅರಮನೆ ಎದುರು 15 ಸಾವಿರ ಜನರು ಯೋಗ ಮಾಡಲಿದ್ದಾರೆ.

ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆ ಯನ್ನು ಜೂನ್ 13 ರೊಳಗೆ ಪೂರ್ಣಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ ಸೂಚಿಸಿದಂತೆ ಸಮಾಜದ ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸು ವಂತೆ ತಿಳಿಸಿದರು.

ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸು ವವರಿಗೆ ಸಾರಿಗೆ ಸೌಲಭ್ಯ ಲಘು ಉಪಾಹಾರ ಕುಡಿಯುವ ನೀರು ಮತ್ತಿತರ ವ್ಯವಸ್ಥೆಗಳನ್ನು ಯಾವುದೇ ಲೋಪವಿಲ್ಲ ದಂತೆ ನಿರ್ವಹಿಸಬೇಕು.ಈ ಕುರಿತು ಕೇಂದ್ರ ಸರ್ಕಾರದೊಂ ದಿಗೆ ಸಮನ್ವಯ ವಹಿಸುವಂತೆ ಸೂಚಿಸಿದರು.

ಇದರೊಂದಿಗೆ ಕೇಂದ್ರ ಆಯುಷ್ ಸಚಿವಾಲಯವು ಯೋಗಕ್ಕೆ ಸಂಬಂಧಿಸಿದಂತೆ ವಸ್ತುಪ್ರದರ್ಶನವನ್ನು ಸಹ ಏರ್ಪಡಿಸಿದೆ.ಇದಕ್ಕೆ ಅಗತ್ಯ ಸಹಕಾರವನ್ನು ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಕೋರ್ ಕಮಿಟಿ ಸೇರಿದಂತೆ ಒಟ್ಟು 14 ಸಮಿತಿಗಳನ್ನು ರಚಿಸಲಾಗಿದ್ದು ಈ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಸೂಚಿಸಿದರು.

ಪ್ರಧಾನಿಯವರ ಭೇಟಿ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆ ಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ರಾಜ್ಯದ 5 ತಾಣ ಗಳಾದ ಮೈಸೂರು,ಹಳೇಬೀಡು,ಹಂಪಿ,ಪಟ್ಟದಕಲ್ ಹಾಗೂ ವಿಜಯಪುರದ ಗೋಲಗುಂಬಜ್ ಈ ಕಾರ್ಯ ಕ್ರಮಕ್ಕೆ ಆಯ್ಕೆಯಾಗಿದೆ.ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡ ಲಿದ್ದು ಹಳೇಬೀಡಿನಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ,ಹಂಪಿಯಲ್ಲಿ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಷಿ,ಪಟ್ಟದಕಲ್ಲಿನಲ್ಲಿ ಕೌಶಲ್ಯ ಅಭಿ ವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ವಿಜಯಪುರದ ಗೋಲಗುಂಬಜ್ ನಲ್ಲಿ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಪಾಲ್ಗೊಳ್ಳಲಿದ್ದಾರೆ.

ಇದಲ್ಲದೆ ರಾಜ್ಯ ಮಟ್ಟದಲ್ಲಿ ರಾಜ್ಯದ 75 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾ ಗುವುದು.

ಸಭೆಯಲ್ಲಿ ಸಚಿವರಾದ ಡಾ.ಕೆ.ಸುಧಾಕರ್,ಎಸ್.ಟಿ. ಸೋಮಶೇಖರ್,ರೇಷ್ಮೆ,ಯುವಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ,ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ,ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಯೋಜನೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್,ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk