ತುಮಕೂರು –
ಈ ವರ್ಷದಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.ತುಮಕೂರು ನಗರದ ಎಂಪ್ರೆಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋ ತ್ಸವ ಉಚಿತವಾಗಿ ಪಠ್ಯ ಪುಸ್ತಕ ವಿತರಣೆ, ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.

ಗ್ರಾಮೀಣ ಪ್ರದೇಶದಲ್ಲಿ ಶಾಲೆಗಳಿಗೆ ಸಾಕಷ್ಟು ದೂರ ನಡೆದುಕೊಂಡು ಹೋಗಬೇಕಿದೆ.ಹಿಂದಿನಂತೆ ಸೈಕಲ್ ಕೊಟ್ಟರೆ ಸಕಾಲಕ್ಕೆ ಹೋಗಲು ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿನಿಯೊಬ್ಬರ ಪ್ರಶ್ನೆಗೆ ಮುಖ್ಯಮಂತ್ರಿ ಈ ಭರವಸೆ ನೀಡಿದರು.ಕಳೆದ ಎರಡು ವರ್ಷಗಳಲ್ಲಿ ಕೋವಿಡ್‌ನಿಂದಾಗಿ ಶಾಲೆಗಳು ನಡೆದಿಲ್ಲ.ಹಾಗಾಗಿ ಸೈಕಲ್ ಕೊಡಲು ಸಾಧ್ಯವಾಗಿಲ್ಲ. ಈ ವರ್ಷ ವ್ಯವಸ್ಥೆ ಮಾಡಲಾಗು ವುದು ಎಂದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಪೂರಕ ಬಜೆಟ್‌ನಲ್ಲಿ ಇದಕ್ಕೆ ಹಣ ಒದಗಿಸಲಾಗುವುದು ಎಂದು ಹೇಳಿದರು.ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಸಾವಧಾನದಿಂದಲೇ ಮುಖ್ಯಮಂತ್ರಿ ಉತ್ತರಿಸಿದರು.ಕಳೆದ ಎಂಟತ್ತು ವರ್ಷಗಳಿಂದ ಶಾಲಾ ಕೊಠಡಿಗಳು ದುರಸ್ತಿ ಯಾಗಿಲ್ಲ.ಸಾಕಷ್ಟು ಕಡೆಗಳಲ್ಲಿ ಸೋರುತ್ತಿವೆ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ.₹1 ಸಾವಿರ ಕೋಟಿ ಮೊತ್ತ ದಲ್ಲಿ 6,500 ಕೊಠಡಿಗಳನ್ನು ನಿರ್ಮಿಸಲು ಉದ್ದೇಶಿಸಲಾ ಗಿದ್ದು ಈ ವರ್ಷದ ಅಂತ್ಯದ ಒಳಗೆ ಪೂರ್ಣಗೊಳಿಸಲಾ ಗುವುದು ಎಂದು ತಿಳಿಸಿದರು.