ಶೀಘ್ರದಲ್ಲೇ 7ನೇ ವೇತನ ಆಯೋಗ ಜಾರಿಗೆ ಭರವಸೆ ನೀಡಿದ CM – ರಾಜ್ಯದ ಸರ್ಕಾರಿ ನೌಕರರಿಗೆ ಅಭಯ ನೀಡಿದ ನಾಡದೊರೆ…..

Suddi Sante Desk
ಶೀಘ್ರದಲ್ಲೇ 7ನೇ ವೇತನ ಆಯೋಗ ಜಾರಿಗೆ ಭರವಸೆ ನೀಡಿದ CM – ರಾಜ್ಯದ ಸರ್ಕಾರಿ ನೌಕರರಿಗೆ ಅಭಯ ನೀಡಿದ ನಾಡದೊರೆ…..

ಬೆಂಗಳೂರು

ಏಳನೇ ವೇತನ ಆಯೋಗದ ವರದಿ ಅನುಷ್ಠಾ ನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆಯೋಗದ ವರದಿಯನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮತ್ತು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್. ಬೈರಪ್ಪ ಅವರು ಮುಖ್ಯಮಂತ್ರಿಯವರನ್ನು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡಿ, ಏಳನೇ ವೇತನ ಆಯೋಗ ವರದಿಯ ಶಿಫಾರಸುಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿದರು.

ಅಲ್ಲದೆಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸು ವಂತೆ ಮನವಿ ಮಾಡಿದರು.ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸರ್ಕಾರವು ರಾಜ್ಯ ಸರ್ಕಾರಿ ನೌಕರರ ಮತ್ತು ನಿವೃತ್ತ ನೌಕರರ ಪರವಾಗಿದೆ. ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ.‌ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದರು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ನಿವೃತ್ತ ನೌಕರರ ಸಂಘದ ಪದಾಧಿಕಾರಿ ಗಳು ಇದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.