This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

National News

ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ ಗೆ ಅಭಿನಂದಿಸಿದ ನಾಗರಾಜ ಛಬ್ಬಿ ದೆಹಲಿಯಲ್ಲಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡು ಶುಭ ಹಾರೈಸಿದ ಛಬ್ಬಿ ಯವರು

Join The Telegram Join The WhatsApp

 


ನವದೆಹಲಿ

ಕಾಂಗ್ರೆಸ್‌ ಪಕ್ಷದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ವಿಧಾನ ಪರಿಷತ ಸದಸ್ಯ ಕಾಂಗ್ರೇಸ್ ಪಕ್ಷದ ಮುಖಂಡ ನಾಗರಾಜ ಛಬ್ಬಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಇಂದು ದೆಹಲಿಯಲ್ಲಿ ಅಧಿಕಾರ ವಹಿಸಿಕೊಳ್ಳುವ ಮುನ್ನ ನವದೆಹಲಿಯಲ್ಲಿರುವ ಪಕ್ಷದ ಮುಖ್ಯ ಕಚೇರಿ ಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಯಾಗಿ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದರು.

ನಂತರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಾಗರಾಜ ಛಬ್ಬಿ ಅವರು ಕನ್ನಡಿಗರೊಬ್ಬರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಶುಭ ಹಾರೈಸಿದರು.ಇನ್ನೂ ಕಾಂಗ್ರೆಸ್‌ನ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂ ದನ ಮಿಸ್ತ್ರಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣೆಯಲ್ಲಿ ಆಯ್ಕೆಯಾಗಿರುವ ಪ್ರಮಾಣಪತ್ರವನ್ನು ಅವರಿಗೆ ಹಸ್ತಾಂತರಿಸಿದರು ಪಕ್ಷದ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಿ ದರು.

ಈ ಮೂಲಕ ನೆಹರೂ-ಗಾಂಧಿ ಕುಟುಂಬದ ಹೊರಗಿನವರೊಬ್ಬರು 24 ವರ್ಷಗಳ ಬಳಿಕ ಪಕ್ಷದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದರು ಪಕ್ಷದ ಅತ್ಯುನ್ನತ ಹುದ್ದೆಗೆ ನಡೆದ ಚುನಾವಣೆ ಯಲ್ಲಿ ಖರ್ಗೆ ಅವರು ಸಂಸದ ಶಶಿ ತರೂರ್ ಅವರನ್ನು ಮಣಿಸಿದ್ದರು.

ಸಮಾರಂಭದಲ್ಲಿ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ದೇಶದ ಮೂಲೆ ಮೂಲೆಗಳಿಂದ ಆಗಮಿಸಿದ  ಹಿರಿಯನಾಯಕರು ಮತ್ತು ಸಂಸದರು ಇವರೊಂದಗೆ ನಾಗರಾಜ ಛಬ್ಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಇನ್ನೂ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಖರ್ಗೆ ಅವರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸ್ಮಾರಕಗಳಿಗೂ ನಮನ ಸಲ್ಲಿಸಿದರು. ಇನ್ನೂ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನ ಸಬಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಪರವಾಗಿ ನಾಗರಾಜ ಛಬ್ಬಿ ಅವರು ನೂತನ ರಾಷ್ಟ್ರೀಯ ಅಧ್ಯಕ್ಷರಿಗೆ ಶುಭ ಹಾರೈಸಿ ಅಭಿನಂದನೆಗಳನ್ನು ಸಲ್ಲಿಸಿದರು.


Join The Telegram Join The WhatsApp

Suddi Sante Desk

Leave a Reply