LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅವಳಿ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಕಾರ್ಯಾಚರಣೆ - 44 ಮಕ್ಕಳ ರಕ್ಷಣೆ

ಹುಬ್ಬಳ್ಳಿ - ಧಾರವಾಡ . ಹುಬ್ಬಳ್ಳಿ ಧಾರವಾಡದ ಮಾರುಕಟ್ಟೆ ಪ್ರದೇಶಗಳಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಬೇರೆ ಬೇರೆ ಕಡೆಗಳಲ್ಲಿ ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ 44 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಗೊಳಿಸುವ ಉದ್ದೇಶದಿಂದ ಜಿಲ್ಲಾಡಳಿತ ಧಾರವಾಡ, ರಾಷ್ಟ್ರೀಯ ಬಾಲ  ಯೋಜನಾ ಸಂಘ ಧಾರವಾಡ,ಕಾರ್ಮಿಕ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಹುಬ್ಬಳ್ಳಿ ಮತ್ತು  ಧಾರವಾಡ ನಗರದ ಮಾರುಕಟ್ಟೆ ಪ್ರದೇಶಗಳಲ್ಲಿ ಏಕಕಾಲದಲ್ಲಿ ಹಠಾತ್ ದಾಳಿ ಕೈಗೊಳ್ಳಲಾಯಿತು.

ದುರ್ಗದ ಬೈಲ್, ಶಾ ಬಜಾರ್, ಮೂರುಸಾವಿರ ಮಠದ ಪ್ರದೇಶ ಹಾಗೂ ಧಾರವಾಡದ ನೆಹರೂ ಮಾರ್ಕೇಟ್, ಸಿಬಿಟಿ, ಸೂಪರ ಮಾರ್ಕೇಟ್ ಸೇರಿದಂತೆ ವಿವಿಧ ಕಡೆ ನಡೆಸಲಾದ ಜಾಗೃತಿ ಮತ್ತು ದಾಳಿಯಲ್ಲಿ ಹೂವು, ಹಣ್ಣು, ತರಕಾರಿ ಮಾರಾಟ ಸೇರಿದಂತೆ ಸ್ವಂತ ಉದ್ಯೋಗ ಹಾಗೂ ಪಾಲಕರಿಗೆ ಸಹಾಯ ಮಾಡುತ್ತಿದ್ದ ಮಕ್ಕಳನ್ನು ರಕ್ಷಿಸಿ ಪಾಲಕರಿಗೆ ಕಾನೂನಾತ್ಮಕ ತಿಳುವಳಿಕೆ ಮೂಡಿಸಿ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಲಾಯಿತು. 

ಅವಳಿನಗರದಲ್ಲಿ ನಡೆದ ಹಠಾತ್ ದಾಳಿಗಳಲ್ಲಿ ಸುಮಾರು 44 ಮಕ್ಕಳನ್ನು  ಕೆಲಸದಿಂದ ಮುಕ್ತಿಗೊಳಿಸಲಾಗಿದೆ, 4 ಜನ ಕಿಶೋರ ಕಾರ್ಮಿಕರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗಿದೆ. ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ 20 ಹಾಗೂ ಧಾರವಾಡದಲ್ಲಿ 24 ಮಕ್ಕಳನ್ನು ಕೆಲಸದಿಂದ‌ ಮುಕ್ತಿಗೊಳಿಸಲಾಯಿತು.

ಎನ್.ಸಿ.ಎಲ್.ಪಿ ನಿರ್ದೇಶಕ ಬಾಳಗೌಡ ಪಾಟೀಲ, ಕಾರ್ಮಿಕ ಅಧಿಕಾರಿ ಮಾರಿಕಾಂಬಾ ಹುಲಕೋಟಿ, ಮಲ್ಲಿಕಾರ್ಜುನ ಜೋಗೂರ, ಅಕ್ಬರ ಅಲ್ಲಾಪೂರ, ಶಮಿ ಹೆಚ್, ಸಂಗೀತಾ ಬೆನಕನಕೊಪ್ಪ, ಮೀನಾಕ್ಷಿ ಶಿಂದಿಹಟ್ಟಿ, ವಿಜಯಕುಮಾರ ಕಡಕೋಳ, ಡಾ ಕಮಲಾ ಬೈಲೂರ, ಸಂಕಲ್ಪ ಸಂಸ್ಥೆಯ ಪ್ರಕಾಶ ಹೂಗಾರ, ಮಕ್ಕಳ ಸಹಾಯವಾಣಿಯ ಚಂದ್ರಶೇಖರ ರಾಹುತರ, ಆನಂದ ಸವಣೂರ, ಉಮಾ ರೊಟ್ಟಿಗವಾಡ, ಮಕ್ಕಳ ರಕ್ಷಣಾ ಘಟಕದ ಕರೆಪ್ಪ ಕೌಜಲಗಿ, ಪ್ರಭಾಕರ ಜಿ, ಮಮ್ಮದಲಿ, ಎಸ್. ಎಂ ಮುಲ್ಲಾ ಸೇರಿದಂತೆ ಪೋಲಿಸ್ ಸಿಬ್ಬಂದಿ ಗಳು ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....