ಬೆಂಗಳೂರು -
ರಾಜ್ಯದಲ್ಲಿನ ಖಾಸಗಿ ಶಾಲೆಗಳ ದುಬಾರಿ ಶುಲ್ಕಕ್ಕೆ ಸುಸ್ತಾಗಿರುವ ಪೋಷಕರೀಗ ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿದ್ದು ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿಗೆ ನಿರೀಕ್ಷೆಗೂ ಮೀರಿ ಬೇಡಿಕೆ ವ್ಯಕ್ತವಾಗು ತ್ತಿದೆ ಹೀಗಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಲು ಸರ್ಕಾರ ಚಿಂತಿಸಿದೆ.
ಈಗಾಗಲೇ ಸಾವಿರಾರು ಶಾಲೆಗಳಲ್ಲಿ ಆರಂಭವಾಗಿ ರುವ ಎಲ್‌ಕೆಜಿ, ಯುಕೆಜಿ ತರಗತಿಗಳನ್ನ ಮತ್ತಷ್ಟು ವಿಸ್ತರಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದ್ದು ಈ ಒಂದು ಕುರಿತು ರಾಜ್ಯಾದ್ಯಂತ ಪರಿಶೀಲನೆ ನಡೆಸಿ ಶೀಘ್ರದಲ್ಲೇ ವರದಿಯನ್ನು ತರಿಸಿಕೊಂಡು ನಂತರ ಬರುವ ಶೈಕ್ಷಣಿಕ ವರ್ಷದಲ್ಲಿ ಆರಂಭ ಮಾಡುವ ಕುರಿತು ಗಂಭೀರವಾಗಿ ಚಿಂತನೆ ಮಾಡ್ತಾ ಇದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....