ಬೆಂಗಳೂರು -
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ (ರಿ) ಬೆಂಗಳೂರು ವತಿಯಿಂದ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ಮಹೇಶ್ ರವರನ್ನು ಹಾಗೂ ಆಯುಕ್ತರಾದ ವಿಕಾಸ ಸುರಳಕರ್ ರವರನ್ನು ಭೇಟಿ ಮಾಡಿ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸ ಕರ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಸುದೀರ್ಘ ವಾಗಿ ಚರ್ಚೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಮಾನ್ಯ ನಿರ್ದೇಶಕರಾದ ಭರತ್ ಅವರು ಉಪಸ್ಥಿತ ರಿದ್ದರು ಮುಂಬಡ್ತಿ ಸಂಬಂಧ ಶೀಘ್ರ ಮುಂಬಡ್ತಿ ಕೌನ್ಸಿಲಿಂಗ್ ವೇಳಾಪಟ್ಟಿ ಪ್ರಕಟಿಸಲು ಅಪರ ಮುಖ್ಯ ಕಾರ್ಯದರ್ಶಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ನಿರ್ದೇಶನ ನೀಡಿದರು
ಶಿಕ್ಷಕರ ಆಕ್ಷೇಪಣೆಗಳನ್ನು ಪರಿಗಣಿಸಿ ಸೆಪ್ಟೆಂಬರ್ 30ರ ಒಳಗಾಗಿ ಅಂತಿಮ ಅರ್ಹ ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟಿಸುವುದಾಗಿ ಮಾನ್ಯ ಆಯುಕ್ತರು ತಿಳಿಸಿದರು
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣ ರಾದವರಿಗೆ ಸಹಾಯಧನ ನೀಡುವ ಸಂಬಂಧ ಪ್ರಸ್ತುತ ವರ್ಷಕ್ಕೆ ಸಂಬಂಧಿಸಿದಂತೆ ಇಲಾಖಾ ಆದೇಶವನ್ನು ಮಾಡುವಂತೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....