ಬೆಂಗಳೂರು -
ರಾಜ್ಯದಲ್ಲಿನ ಶಾಲೆಗಳ ಸಮಯವನ್ನು ಬದಲಾವಣೆ ಮಾಡುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತೀವ್ರ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಗರದ ಶಾಲೆ ಗಳ ವೇಳಾಪಟ್ಟಿಯನ್ನು ಬದಲಾಯಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದು ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಶಾಲಾ ಸಮಯವನ್ನು ಪರಿಷ್ಕರಿಸು ವಂತೆ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಸಾರ್ವಜ ನಿಕರಿಂದ ಮನವಿಗಳು ಬಂದಿವೆ ಎಂದರು
ಶಾಲಾ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು ವಿವಿಧ ಇಲಾಖೆಗಳು ಸಂಚಾರ ಪೊಲೀಸ್ ಅಧಿಕಾರಿಗಳು, ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಶಾಲಾ ವಾಹನ ಚಾಲಕರ ಸಂಘ ಮತ್ತು ಪೋಷಕರೊಂದಿಗೆ ಸುದೀರ್ಘ ಚರ್ಚೆ ನಡೆಸಲಿದೆ ಎಲ್ಲ ಭಾಗಿದಾರ ಅಭಿಪ್ರಾಯಗಳನ್ನು ಸಂಗ್ರಹಿಸಿದ ನಂತರವೇ ಸೂಕ್ತ ಹಾಗೂ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರ ರಾಜಧಾನಿಯಂತೆಯೇ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಮತ್ತು ರಾಜ್ಯದ ಇತರ ಪ್ರಮುಖ ನಗರ ಪಟ್ಟಣಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಶಾಲಾ ವಾಹನಗಳು ಹಾಗೂ ಕಚೇರಿ ವಾಹನಗಳು ಒಂದೇ ಸಮಯದಲ್ಲಿ ರಸ್ತೆಗೆ ಇಳಿಯುವುದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಈ ಹಿಂದೆ ಉಚ್ಚ ನ್ಯಾಯಾಲಯ ಕೂಡ ಸಂಚಾರ ನಿಯಂತ್ರಣಕ್ಕಾಗಿ ಶಾಲಾ ಮತ್ತು ಕಚೇರಿ ವೇಳಾಪಟ್ಟಿಯಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸರ್ಕಾರಕ್ಕೆ ಸಲಹೆ ನೀಡಿತ್ತು.
ಶಾಲಾ ಸಮಯವನ್ನು ಸುಮಾರು 30 ನಿಮಿಷದಿಂದ 1 ಗಂಟೆಗಳ ಕಾಲ ಮುಂಚಿತವಾಗಿ ಅಥವಾ ಬದಲಾ ಯಿಸಿ ನಿಗದಿಪಡಿಸುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ಹೆಚ್ಚುವುದರ ಜೊತೆಗೆ ರಸ್ತೆಗಳಲ್ಲಿ ವಾಹನ ಗಳ ಒತ್ತಡ ಕಡಿಮೆಯಾಗಲಿದೆ ಎಂಬುದು ಇಲಾಖೆಯ ಲೆಕ್ಕಾಚಾರವಾಗಿದ್ದು ಶೀಘ್ರದಲ್ಲೇ ಈ ಒಂದು ಕುರಿತು ಇಲಾಖೆ ಸ್ಪಷ್ಟವಾಗಿ ಸೂಕ್ತವಾದ ಆದೇಶ ಮಾಡಲಿದೆ ಎಂದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು......