ಬೆಂಗಳೂರು -
ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಶೀಘ್ರದಲ್ಲೇ ತೆರೆಯಲಿದೆ ಮುಂದಿನ ವರ್ಷದಿಂದ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ನೀತಿ ಜಾರಿಗೊಳಿಸಲಿರುವ ರಾಜ್ಯ ಸರ್ಕಾರ ಅಗತ್ಯ ಅನುದಾನ ಮೀಸಲಿಟ್ಟಿದೆ. ವಿಶೇವೆಂ ದರೆ 2027ರಿಂದ ಕೆಪಿಎಸ್ ಶಾಲೆಗಳಿಗೆ ಉಚಿತ ಶಾಲಾವಾಹನಗಳು ಓಡಾಲಿವೆ.
ಈ ಕುರಿತು ಖುದ್ದಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೇ ಮಾಹಿತಿ ನೀಡಿದ್ದಾರೆ. ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಸಾಗರ ತಾಲ್ಲೂಕಿನ ತಾಳಗುಪ್ಪ ಹೋಬಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಸುಮಾರು ₹2 ಕೋಟಿ ಅನುದಾನದಲ್ಲಿ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿ ಮತ್ತು ವಿವಿಧ ಕಾಮಗಾರಿಗಳಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರೂ ಆದ ಮಧು ಬಂಗಾರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ವಿದ್ಯಾರ್ಥಿ ಗಳು ಎದುರಿಸುತ್ತಿರುವ ಸಾರಿಗೆ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿದರು. ನಾನು ಎಲ್ಲಿಗೆ ಹೋದರೂ ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ವ್ಯವಸ್ಥೆಯ ಸಮಸ್ಯೆ ಗಮನಕ್ಕೆ ಬರುತ್ತಿದೆ. ಇನ್ನು ಮುಂದೆ ಈ ಸಮಸ್ಯೆ ಇರಬಾರದು ಎಂಬ ಉದ್ದೇಶದಿಂದ ಮುಂದಿನ ವರ್ಷದಿಂದ ಕೆಪಿಎಸ್ ಶಾಲೆಗಳಿಗೆ ವಿಶೇಷ ಶಾಲಾ ವಾಹನಗಳ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲು ತೀರ್ಮಾ ನಿಸಿದ್ದೇವೆ ಎಂದು ಘೋಷಿಸಿದರು.
ನಿಮ್ಮ ಒಂದು ಮತ ನನಗೆ 1 ಕೋಟಿ 14 ಲಕ್ಷ ಮಕ್ಕಳ ಸೇವೆ ಮಾಡುವ ಭಾಗ್ಯ ಕಲ್ಪಿಸಿದೆ. ರಾಜ್ಯದಲ್ಲಿ 44 ಸಾವಿರ ಸರ್ಕಾರಿ ಶಾಲೆಗಳಿವೆ. ಮುಂದಿನ ದಿನಗಳಲ್ಲಿ 2,500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ. ಮೊದಲ ಹಂತದಲ್ಲಿ 1,000 ಕೆಪಿಎಸ್ ಶಾಲೆಗಳು ನಿರ್ಮಾಣವಾಗಲಿವೆ ಎಂದರು.
ಉದ್ದೇಶಿತ ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಸರ್ಕಾರವು ₹4,500 ಕೋಟಿ ಅನುದಾನ ಮೀಸಲಿಟ್ಟಿದೆ ಕೆಪಿಎಸ್ ಶಾಲೆಗಳು ರಾಜ್ಯದ ಮಾದರಿ ಶಾಲೆಗಳಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ನಮ್ಮ ನಾಯಕ ರಾಹುಲ್ ಗಾಂಧಿ ಅವರೂ ಕೆಪಿಎಸ್ ಶಾಲೆಗಳ ಪರಿಕಲ್ಪನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ದ್ದಾರೆ" ಎಂದರು.
ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಪಿಯುಸಿ ಹಂತ ದವರೆಗೆ ಒಂದೇ ಕ್ಯಾಂಪಸ್‌ನಲ್ಲಿ ಶಿಕ್ಷಣ ಪಡೆಯುವ ವ್ಯವಸ್ಥೆ ಕಲ್ಪಿಸಲಾಗುವುದು. ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕೆಪಿಎಸ್ ಶಾಲೆಗಳಲ್ಲಿ ನೀಡುವ ಗುರಿ ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....