LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....

ಬೆಂಗಳೂರು -

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಹೊಸದೊಂದು ಕಾರ್ಯಕ್ರಮ ವನ್ನು ಇಲಾಖೆ ಪರಿಚಯಿಸಿದೆ ಹೌದು ನಗರ ಪ್ರದೇಶದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೃಷಿ,ತೋಟಗಾರಿಕೆ, ಪಶುಸಂಗೋಪನೆ ಹಾಗೂ ಗ್ರಾಮೀಣ ಸಂಸ್ಕೃತಿಯ ನೇರ ಅನುಭವ ಕಲ್ಪಿಸುವ ಸಲುವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯು "ಗ್ರಾಮಾನುಭವ" ಎಂಬ ವಿಶಿಷ್ಟ ಕಾರ್ಯಕ್ರ ಮಕ್ಕೆ ಅನುಮೋದನೆ ನೀಡಿದೆ.

ನಗರಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕೃಷಿ ಪದ್ಧತಿ ಗಳು, ಮಣ್ಣು ಮತ್ತು ನೀರಿನ ಸಂರಕ್ಷಣೆ, ಆಹಾರ ಭದ್ರತೆ ಹಾಗೂ ಗ್ರಾಮೀಣ ಸಮುದಾಯದ ಜೀವನ ಶೈಲಿಯನ್ನು ಪ್ರಾಯೋಗಿಕವಾಗಿ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಜಾರಿಗೆ ತರಲಾ ಗುತ್ತಿದೆ.ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ನಗರ ಪ್ರದೇಶದ ಸರಕಾರಿ, ಅನುದಾನಿತ ಹಾಗೂ ಅನುದಾ ನರಹಿತ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜು ಗಳ 8, 9 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುತ್ತದೆ.

ಕಾರ್ಯಕ್ರಮದಡಿ ಒಂದು ರಾತ್ರಿ ಸೇರಿದಂತೆ ಎರಡು ದಿನಗಳ ಕಾಲ ಗ್ರಾಮದಲ್ಲಿಯೇ ಉಳಿದುಕೊಳ್ಳುವ ಮಕ್ಕಳಿಗೆ ಗ್ರಾಮೀಣದ ಜನಜೀವನದ ಬಗ್ಗೆ, ಕೃಷಿ ಚಟುವಟಿಕೆ ಬಗ್ಗೆ, ಸಾಂಸ್ಕೃತಿಕ ಜಗತ್ತಿನ ಬಗ್ಗೆ ಮಾಹಿತಿ ನೀಡಿ "ಗ್ರಾಮಾನುಭವ'ದ ಪರಿಚಯ ಮಾಡಲಾ ಗುತ್ತದೆ.ಕ್ಷೇತ್ರ ಅಧ್ಯಯನ ಮತ್ತು ಪರಿಚಯಾತ್ಮಕ ಭೇಟಿ ಗಳನ್ನು ಸೆಪ್ಟೆಂಬರ್‌ನಿಂದ ಡಿಸೆಂಬರ್‌ನೊಳಗೆ ಪೂರ್ಣಗೊಳಿಸಬೇಕು ತದನಂತರ ಜನವರಿಯಿಂದ ಫೆಬ್ರವರಿಯವರೆಗೆ ಶಾಲಾ ಮಟ್ಟದ ಅನುಪಾಲನಾ ಚಟುವಟಿಕೆಯನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಮೊದಲ ಹಂತದಲ್ಲಿ ಕೆಪಿಎಸ್‌, ಪಿಎಂಶ್ರೀ ಸೇರಿದಂತೆ 800ಕ್ಕಿಂತ ಹೆಚ್ಚು ಮಕ್ಕಳಿರುವ ಸರಕಾರಿ ಶಾಲೆ ಮತ್ತು ಪಿಯು ಕಾಲೇಜು ಸೇರಿದಂತೆ ನಗರ ಭಾಗದಲ್ಲಿರುವ ಒಟ್ಟು 160 ಸರಕಾರಿ ಶಾಲೆಗಳು ಮತ್ತು ಕಾಲೇಜುಗಳ ಸುಮಾರು 49,214 ವಿದ್ಯಾರ್ಥಿಗಳಿಗೆ 2.46 ಕೋ. ರೂ. ವೆಚ್ಚದಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸ ಲಾಗುತ್ತಿದ್ದು ಯಾವ ರೀತಿ ಸ್ಪಂದನೆ ಸಿಗಲಿದೆ ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು......

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....ಶಿಕ್ಷಕರ ಎರಡು ಪ್ರಮುಖ ಬೇಡಿಗಳಿಗೆ ಅಸ್ತು ಎಂದ ಇಲಾಖೆ ಮನವಿಗೆ ಸ್ಪಂದಿಸಿದ ಅಧಿಕಾರಿಗಳಿಗೆ ಧನ್ಯವಾದಗಳು ಹೇಳಿದ KSPSTA......ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಇಲಾಖೆಯಿಂದ ಅಧಿಸೂಚನೆ ಪ್ರಕಟ..... ಪೊಲೀಸ್‌ ಠಾಣೆ ಮೆಟ್ಟಿಲೇರಿದ ಸರ್ಕಾರಿ ಶಾಲಾ ಮಕ್ಕಳು ಕಾರಣ ಕೇಳಿದ್ರೆ ಶಾಕ್ ಆಗತೀರಾ.....ಗಣೇಶ ಪ್ರತಿಷ್ಠಾಪನೆಗೆ ಧಾರವಾಡದಲ್ಲಿ ಒಂದೇ ಸ್ಥಳದಲ್ಲಿ ಸಿಗಲಿದೆ ಅನುಮತಿ.....ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ ಯಿಂದ ಮಾಸ್ಟರ್ ಪ್ಲಾನ್.....ಬಿ.ಎಡ್. ಶಿಕ್ಷಕರಿಗೆ ಬಿಗ್ ರಿಲೀಫ್.....