LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲಾ ಮಕ್ಕಳ ಕೆಲಸ ವೈರಲ್..... ರಾಜ್ಯವೇ ಮೆಚ್ಚವಂತಹ ಕೆಲಸ ಮಾಡಿದ ಸರ್ಕಾರಿ ಶಾಲಾ ಮಕ್ಕಳು.....

ಕಲಬುರಗಿ -

ರಸ್ತೆ ದುರಸ್ತಿಗೆ ಹಲವು ಬಾರಿ ಮನವಿ ಮಾಡಿದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬೇಸತ್ತ ಶಾಲಾ ಮಕ್ಕಳು ತಾವೇ ರಸ್ತೆ ಗುಂಡಿಗಳನ್ನು ಮಣ್ಣು ಮತ್ತು ಕಲ್ಲುಗಳಿಂದ ಮುಚ್ಚುವ ಮೂಲಕ ಗಮನ ಸೆಳೆದಿದ್ದಾರೆ.ಕಮಲಾಪುರ ತಾಲ್ಲೂಕಿನ ಕಾಳಮಂದರಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಕ್ಕಳ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮತ್ತೊಂದೆಡೆ, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶವೂ ವ್ಯಕ್ತವಾಗಿದೆ. ಕಾಳಮಂದರಗಿಯಿಂದ ಮುಡಬಿ, ಹಿರನಾಗಂವ, ಬಂಗ್ಲಾ ಹಾಗೂ ಬಸವ ಕಲ್ಯಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅಲ್ಲಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಸಂಚರಿಸಲು ತೀವ್ರ ತೊಂದರೆ ಅನುಭ ವಿಸುವಂತಾಗಿದೆ.

ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿರುವುದರಿಂದ ಬಸ್ ಸಂಚಾರಕ್ಕೂ ಅಡಚಣೆಯಾಗಿದೆ ವಾಹನಗಳು ನಿಧಾನವಾಗಿ ಚಲಿಸಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದ್ದು, ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆ ತಲುಪಲು ಪರದಾಡುವಂತಾಗಿದೆ ಮಳೆ ಬಂದಾಗ ಗುಂಡಿಗಳಲ್ಲಿ ನೀರು ನಿಲ್ಲುವುದರಿಂದ ಅವುಗಳ ಆಳ ತಿಳಿಯದೆ ಅಪಘಾತ ಸಂಭವಿಸುವ ಭೀತಿಯೂ ಹೆಚ್ಚಾಗಿದೆ. ರಸ್ತೆ ದುರಸ್ತಿಗೆ ಅಧಿಕಾರಿಗಳು ಗಮನಹರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಈ ಕುರಿತು ವಾರ್ತಾಭಾರತಿಯೊಂದಿಗೆ ಮಾತನಾಡಿದ ಬಸವಕಲ್ಯಾಣದಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಸ್ಥಳೀಯ ನಿವಾಸಿ ಜಗದೇವಿ ಹುಳಕರ್, "ಗ್ರಾಮಕ್ಕೆ ಬರಬೇಕಾದ ಬಸ್‌ಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ರಸ್ತೆ ಸರಿಯಿಲ್ಲ ಎಂಬ ಕಾರಣ ನೀಡಿ ಕೆಲವೊಮ್ಮೆ ಎರಡು ದಿನಗಳ ವರೆಗೆ ಬಸ್‌ಗಳೇ ಬರುವುದಿಲ್ಲ ಬಸ್ ಡಿಪೋ ವ್ಯವಸ್ಥಾಪಕರನ್ನು ವಿಚಾರಿಸಿದರೆ ರಸ್ತೆ ದುರಸ್ತಿ ಮಾಡಿಸುವಂತೆ ಹೇಳುತ್ತಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಇಒ ಅವರ ಗಮನಕ್ಕೂ ತಂದರೂ ಯಾರೂ ಸ್ಪಂದಿಸಿಲ್ಲ. ಇದರಿಂದ ಶಾಲಾ-ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ.

ಹೀಗಾಗಿ ಗ್ರಾಮದ ಎಲ್ಲ ವಿದ್ಯಾರ್ಥಿಗಳು ಒಟ್ಟಾಗಿ ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದೇವೆ. ಸುಮಾರು 9 ಕಿ.ಮೀ. ಉದ್ದದ ರಸ್ತೆ ಹದಗೆಟ್ಟಿದ್ದು, ಭಾನುವಾರ ಹಾಗೂ ಇತರ ರಜಾ ದಿನಗಳಲ್ಲಿ ನಾವೆಲ್ಲರೂ ಸೇರಿ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು.

ಸಾಮಾನ್ಯವಾಗಿ ರಸ್ತೆ ದುರಸ್ತಿ ಮಾಡುವುದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಜವಾಬ್ದಾರಿ ಯಾಗಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಶಾಲಾ ಮಕ್ಕಳು ರಸ್ತೆ ಗುಂಡಿಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಮಕ್ಕಳು ಮಣ್ಣು ಮತ್ತು ಕಲ್ಲುಗಳಿಂದ ಗುಂಡಿಗಳನ್ನು ಮುಚ್ಚಿರುವುದು ತಾತ್ಕಾಲಿಕ ಪರಿಹಾರ ಮಾತ್ರ. ವಾಹನಗಳ ನಿರಂತರ ಸಂಚಾರದಿಂದ ಮತ್ತೆ ಗುಂಡಿಗಳು ಬೀಳುವ ಸಾಧ್ಯತೆ ಯಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ರಸ್ತೆಯನ್ನು ಶಾಶ್ವತವಾಗಿ ದುರಸ್ತಿ ಮಾಡಬೇಕು. ಶಾಲಾ ಮಕ್ಕಳ ಸುರಕ್ಷಿತ ಸಂಚಾರಕ್ಕೆ ಆದ್ಯತೆ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕಲಬುರಗಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನವೆಂಬರ್ 18 ರಿಂದ ಶಾಲಾ-ಕಾಲೇಜು ಬಂದ್‌ಗೆ ಕರೆ.....ಬಂದ್ ಗೆ ಕರೆ ನೀಡಿದ ಹೋರಾಟ ಸಮನ್ವಯ ಸಮಿತಿ.....ಲೋಕಾಯುಕ್ತ ಬಲೆಗೆ ಬಿದ್ದ ಮೂವರು ಸರ್ಕಾರಿ ನೌಕರರು.....ವೇತನಕ್ಕೆ ತಕ್ಕ ಬದ್ಧತೆ ತೋರಿಸಿ ಸರ್ಕಾರಿ ಶಿಕ್ಷಕರಿಗೆ ಸಿಎಂ ಕಿವಿಮಾತು.....ಉಚಿತ ಹೋಮ್ ಡೆಲಿವರಿ.....ಗ್ರಾಹಕರಿಗೆ Big Mishra ದೀಪಾವಳಿ ಹಬ್ಬದ ಸಿಹಿ ಕೊಡುಗೆ.....ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತಕ್ಕೆ ಬಲಿ.....ಕಂಬನಿ ಮಿಡಿದ ನಾಡಿನ ಶಿಕ್ಷಕ ಬಂಧುಗಳು.....ರಾಜ್ಯ ಸರ್ಕಾರಿ ನೌಕರರಿಗೆಸಂತಸವನ್ನುಂಟು ಮಾಡಿದ CM ಒಪ್ಪಿಗೆ..... ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳ ಜೋಡಣೆ..... ಆತಂಕ ತಂದಿಟ್ಟ ಸರ್ಕಾರದ ನಡೆ.....ಬಾಗಲಕೋಟೆ ಅಪರ ಜಿಲ್ಲಾಧಿಕಾರಿಯಾಗಿ ಮಂಜುನಾಥ ಡೊಂಬರ ಅಧಿಕಾರ ಸ್ವೀಕಾರ ಸಹಪಾಠಿಗಳಿಂದ ಆತ್ಮೀಯ ಸನ್ಮಾನ – ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದ ಸ್ನೇಹಬಳಗ.....ಸರ್ಕಾರಿ ಶಾಲಾ ಮಕ್ಕಳ ಕೆಲಸ ವೈರಲ್..... ರಾಜ್ಯವೇ ಮೆಚ್ಚವಂತಹ ಕೆಲಸ ಮಾಡಿದ ಸರ್ಕಾರಿ ಶಾಲಾ ಮಕ್ಕಳು.....ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಹೊಸ ಜವಾಬ್ದಾರಿ ನೀಡಿದ ಸರ್ಕಾರ..... ಹೊಸ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ.....