ಬೆಂಗಳೂರು -
12ನೇ ಮಹಡಿಯಿಂದ ಹಾರಿ ಗ್ರೂಪ್-ಸಿ ನೌಕರ ರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿ ನಲ್ಲಿ ನಡೆದಿದೆ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ರುವ ಕೆಪಿಟಿಸಿಎಲ್ನ ಪ್ರಧಾನ ಕಚೇರಿ ಇಂಧನ ಭವನದ 12ನೇ ಮಹಡಿಯಿಂದ ಹಾರಿ ಗ್ರೂಪ್ ಸಿ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಯನಗರ ನಿವಾಸಿ ವಜ್ರಕುಮಾರ್ (48) ಆತ್ಮಹತ್ಯೆ ಮಾಡಿಕೊಂಡ ನೌಕರನಾಗಿದ್ದು ಕೆಪಿಟಿಸಿಎಲ್ನ ಗ್ರಾಚ್ಯುಟಿ ವಿಭಾಗದಲ್ಲಿ ಜೂನಿಯರ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಜ್ರಕುಮಾರ್ 12ನೇ ಮಹಡಿಯಿಂದ ಬಿದ್ದಿದ್ದಾರೆ. ತೀವ್ರವಾಗಿ ಗಾಯ ಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
ವಜ್ರಕುಮಾರ್ ಕೆಲ ದಿನಗಳಿಂದ ಮಾನಸಿಕ ಖಿನ್ನತೆ ಯಿಂದ ಬಳಲುತ್ತಿದ್ದರು ಎಂಬುದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಅಲ್ಲದೆ, ಅವರು ತೀವ್ರ ಕೌಟುಂಬಿಕ ಕಲಹ ಎದುರಿಸುತ್ತಿದ್ದು, ವಿಚ್ಛೇದನ ಕೋರಿ ನ್ಯಾಯಾಲಯದಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದರು ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....