ಸಾಗರ -
ನವೆಂಬರ್ ಒಳಗೆ 1,250 ಕೆಪಿಎಸ್ ಶಾಲೆಗಳು ಆರಂಭಗೊಳ್ಳಲಿವೆ ರಾಜ್ಯದಲ್ಲಿ ನವೆಂಬರ್ ಅಂತ್ಯ ದೊಳಗೆ 1,250 ಕೆಪಿಎಸ್ ಶಾಲೆಗಳು ಆರಂಭ ಗೊಳ್ಳಲಿವೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.ಇಲ್ಲಿನ ಗಾಂಧಿ ಮೈದಾನದಲ್ಲಿ ಸೋಮವಾರ ಜಿಲ್ಲಾಡಳಿತ ಆಯೋಜಿಸಿದ್ದ ಪ್ರಜಾ ಸೇವಾ ಅಭಿಯಾನದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡುವ ಕೆಪಿಎಸ್ ಶಾಲೆಗಳಿಂದ ಸರ್ಕಾರಿ ಶಾಲೆಗಳ ಬಗೆಗಿನ ಅಸಡ್ಡೆಯ ಮನೋ ಭಾವ ದೂರಾಗಲಿದೆ' ಎಂದರು.'ಕೆಪಿಎಸ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಜೊತೆಗೆ ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. ಕ್ರೀಡೆ, ಕಲೆ, ಸಾಹಿತ್ಯ, ಸಂಸ್ಕೃತಿಗೆ ಸಂಬಂಧಪಟ್ಟ ವಿಷಯಗಳಲ್ಲೂ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡುವಂತೆ ತರಬೇತಿ ನೀಡಲು ತಜ್ಞ ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ' ಎಂದು ತಿಳಿಸಿದರು.
'ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೀಡುವ ಪ್ರತಿಯೊಂದು ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಯವರು ಪರಿಶೀಲನೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡಲಿದ್ದಾರೆ. ಹೀಗೆ ಬಂದ ಅರ್ಜಿಗಳ ಪರಿಶೀಲನೆ ಯಾವ ಹಂತದಲ್ಲಿದೆ ಎಂಬ ಮಾಹಿತಿ ನೇರವಾಗಿ ಮುಖ್ಯಮಂತ್ರಿ ಕಚೇರಿಗೆ ತಲುಪಲಿದೆ' ಎಂದು ಹೇಳಿದರು.
ಸಾರ್ವಜನಿಕರ ಸಮಸ್ಯೆಗಳನ್ನು ಜನಪ್ರತಿನಿಧಿಗಳು, ಅಧಿಕಾರಿಗಳು, ನೌಕರರು ಒಂದೇ ಸ್ಥಳದಲ್ಲಿ ಸೇರಿ ಆಲಿಸಿ ಅದಕ್ಕೆ ಪರಿಹಾರ ನೀಡಲು ಮುಂದಾಗು ವುದು ಪ್ರಜಾಸೇವಾ ಅಭಿಯಾನದ ಪ್ರಮುಖ ಆಶಯವಾಗಿದೆ' ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.'ರೈತರು, ಕಾರ್ಮಿಕರು ಸೇರಿದಂತೆ ವಿವಿಧ ವರ್ಗದವರು ಸರ್ಕಾರದ ಹಲವು ಇಲಾಖೆಗಳಿಂದ ಸಕಾಲದಲ್ಲಿ ಕೆಲಸಗಳು ಆಗಬೇಕು ಎಂಬ ನಿರೀಕ್ಷೆಯಲ್ಲಿರುತ್ತಾರೆ. ಅಂತಹ ನಿರೀಕ್ಷೆಗಳನ್ನು ನಿಜ ಮಾಡುವ ಉದ್ದೇಶದಿಂದಲೇ ರಾಜ್ಯ ಸರ್ಕಾರ ಪ್ರಜಾಸೇವಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಿದೆ' ಎಂದರು.
ಸುದ್ದಿ ಸಂತೆ ನ್ಯೂಸ್ ಸಾಗರ.....