LIVE TV LocalCrimeNationalInternationalPoliticsEducationTechnologyEntertainmentSportsFeature
State News

1st ರ‍್ಯಾಂಕ್ ವಿದ್ಯಾರ್ಥಿ ಆತ್ಮಹತ್ಯೆ ಮನೆಯಿಂದ ಕಾಣೆಯಾಗಿದ್ದ ಸೋಮನಾಥ್ ಲಾರಿಯಲ್ಲಿ ಶವವಾಗಿ ಪತ್ತೆ.....

ಹೊಸಕೋಟೆ -

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ದ್ವಿತೀಯ ಪಿಯುಸಿಯ ವಿದ್ಯಾರ್ಥಿಯೊಬ್ಬನ ಶವ ಲಾರಿಯಲ್ಲಿ ಪತ್ತೆಯಾಗಿದ್ದು ಇದು ಹಲವಾರು ಸಂಶಯ ಗಳಿಗೆ ಎಡೆ ಮಾಡಿಕೊಟ್ಟಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿಯ ಸಮೃದ್ದಿ ಕಾಲೇಜಿನಲ್ಲಿ ಸೋಮನಾಥ್ (19) ಮೃತ ವಿದ್ಯಾರ್ಥಿಯಾಗಿದ್ದಾನೆ

ಕಾಲೇಜಿನಲ್ಲಿ ಟಾಪರ್‌ ಆಗಿದ್ದ ಸೋಮನಾಥ್‌ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಲಿದ್ದನು.ಇನ್ನು ಒಂದೇ ಪರೀಕ್ಷೆ ಬಾಕಿ ಇತ್ತು.ಆದರೆ ಏಕಾಏಕಿಯಾಗಿ ಮನೆಯಿಂದ ಕಾಣೆ ಯಾಗಿದ್ದು ಇದೀಗ ಶವ ದೊರೆತಿದೆ.ಮನೆ ಬಿಡುವ ಮೊದಲು ಸ್ನೇಹಿತರು ನನ್ನ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ.ಅವರು ಹಾಗೆ ಮಾಡುವ ಮೊದಲು ಮೊದಲು ನಾನೇ ಸಾಯ್ತೀನಿ ಎಂದು ಡೆತ್ ನೋಟ್ ಬರೆದಿಟ್ಟಿದ್ದ ಎನ್ನಲಾಗಿದೆ.ಮಗ ಕಾಣೆಯಾಗಿರುವ ಬಗ್ಗೆ ಪಾಲಕರು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು

ಪೊಲೀಸರು ಈತನನ್ನು ಹುಡುಕುತ್ತಿರುವಾಗಲೇ ಬೆಂಗಳೂ ರಿನ ಮಾರತಹಳ್ಳಿಯ ಬಳಿ ಲಾರಿಯಲ್ಲಿ ಮೃತದೇಹ ವೊಂದು ಪತ್ತೆಯಾಗಿತ್ತು.ತಮಿಳುನಾಡಿನಿಂದ ಮರಳು ತುಂಬಿಕೊಂಡು ಬಂದಿದ್ದ ಟಿಪ್ಪರ್ ಲಾರಿ ಇದು.ಪೊಲೀಸರು ಈ ಬಗ್ಗೆ ಪರಿಶೀಲನೆ ಮಾಡಿದಾಗ ಮುಖಕ್ಕೆ ಮಾಸ್ಕ್‌ ಹಾಕ ಲಾಗಿತ್ತು.ಅದು ಅನಾಥಶವವಾಗಿಯೇ ಹೋಗುವುದರ ಲ್ಲಿತ್ತು.ಆದರೆ ಮಾಸ್ಕ್‌ ಮೇಲೆ ಆತನ ಹೆಸರಿತ್ತು.ಆಗ ಪೊಲೀಸರು ಸುತ್ತಲಿನ ಊರುಗಳಲ್ಲಿ ಈ ಬಗ್ಗೆ ವಿಚಾರಿಸಿ ದಾಗ ಸೋಮನಾಥ್‌ ಕಾಣೆಯಾಗಿರುವ ಕಂಪ್ಲೇಂಟ್‌ ತಾಳೆ ಮಾಡಲಾಯಿತು.ಅವನೇ ಇವನು ಎನ್ನುವುದು ತಿಳಿಯಿತು.

ಈತನ ಸಾವಿನ ಬಗ್ಗೆ ಹಲವಾರು ಸಂದೇಹಗಳಿವೆ. ಡೆತ್‌ ನೋಟ್‌ ಹಿಂದಿನ ಉದ್ದೇಶವೇನು ಯಾರಾದರೂ ರ್ಯಾಗಿಂಗ್‌ ಮಾಡುತ್ತಿದ್ದರಾ ಈತನ ಕೊಲೆಯಾಗಿದೆಯೆ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೆ ಎಂಬಿತ್ಯಾದಿ ಪ್ರಶ್ನೆಗಳು ಮೂಡಿವೆ.ಉಸಿರುಕಟ್ಟಿ ಸತ್ತಿರುವ ಶಂಕೆ ವ್ಯಕ್ತವಾ ಗಿದ್ದರೂ ಲಾರಿಯ ಅಡಿಗೆ ಬಂದು ಮೃತಪಟ್ಟಿರಬಹುದು ಎಂದೂ ಹೇಳಲಾಗುತ್ತಿದೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....