LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪೊಲೀಸ್ ಠಾಣೆ ಮೆಟ್ಟಿಲೇರಿದ 2ನೇ ತರಗತಿ ವಿದ್ಯಾರ್ಥಿ.....

ಬಾಗಲಕೋಟೆ -

ಬಾಗಲಕೋಟೆ: ಹೋಮ್‌ವರ್ಕ್ ಮಾಡದಿದ್ದಕ್ಕೆ 2ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕರಿಂದ ಹಲ್ಲೆ ಆರೋಪ
ಕೈ-ಕಾಲುಗಳ ಮೇಲೆ ಬಾಸುಂಡೆ ಬರುವ ಹಾಗೆ ಥಳಿತ ಹೌದು ವಿದ್ಯಾರ್ಥಿಗೆ ತೀವ್ರ ಜ್ವರ ಪೋಷಕರಿಂದ ಪೊಲೀಸ್ ಠಾಣೆಗೆ ದೂರು ಇಂತಹ ದೊಂದು ಘಟನೆ
ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ ಹೋಮ್‌ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಾಲೆಯ ಶಿಕ್ಷಕರು ಎರಡನೇ ತರಗತಿಯ ವಿದ್ಯಾರ್ಥಿಯ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ನಾವಲಗಿ ಗ್ರಾಮದಲ್ಲಿ ಕೇಳಿಬಂದಿದೆ.

ನಾವಲಗಿ ಗ್ರಾಮದ ರಾಣಿ ಚೆನ್ನಮ್ಮ ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಶ್ರೇಯಸ್ ಆಸಂಗಿ ಎಂಬ ಎರಡನೇ ತರಗತಿಯ ವಿದ್ಯಾರ್ಥಿ ಹಲ್ಲೆಗೊ ಳಗಾದ ಬಾಲಕ ಎಂದು ಗುರುತಿಸಲಾಗಿದೆ.ಶಾಲೆಯ ಶಿಕ್ಷಕಿ ವಿಜಯಲಕ್ಷ್ಮೀ ಹಾಗೂ ಮುಖ್ಯ ಶಿಕ್ಷಕ ಅಂಬಿ ಅವರು ಹೋಮ್‌ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಹಲ್ಲೆಯ ಪರಿಣಾಮವಾಗಿ ವಿದ್ಯಾರ್ಥಿಯ ಕೈ ಹಾಗೂ ಕಾಲುಗಳ ಮೇಲೆ ಬಾಸುಂಡೆಗಳು ಮೂಡಿದ್ದು, ತೀವ್ರ ಜ್ವರ ಕಾಣಿಸಿಕೊಂಡಿದೆ ಎನ್ನಲಾಗಿದೆ. ಪುಟ್ಟ ಬಾಲಕನ ಸ್ಥಿತಿ ಕಂಡು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಪ್ರೀತಿ, ಕಾಳಜಿ ಮತ್ತು ಉತ್ತಮ ಸಂಸ್ಕಾರ ನೀಡಬೇಕಾದ ಶಾಲೆಯಲ್ಲೇ ಇಂತಹ ಘಟನೆ ನಡೆದಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣ ವಾಗಿದೆ.

ಈ ಸಂಬಂಧ ವಿದ್ಯಾರ್ಥಿಯ ಪೋಷಕರು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.ಪೊಲೀಸ್ ಇಲಾಖೆ ಪ್ರಕರಣ ದ ಕುರಿತು ಸಮಗ್ರ ತನಿಖೆ ನಡೆಸಿ, ಆರೋಪಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ ತಪ್ಪಿತಸ್ಥರು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಪೋಷಕರು ಹಾಗೂ ಸಾರ್ವಜನಿಕರ ಒತ್ತಾಯವಾಗಿದೆ.

ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ.....ಅಕ್ಷರ ದಾಸೋಹ ಯೋಜನೆ ಅಧಿಕಾರಿಯನ್ನು ಲೋಕಾ ಬಲೆಗೆ ಹಾಕಿದ ಶಿಕ್ಷಕ.....ಲೋಕಾಯುಕ್ತ ಬಲೆಗೆ ಬಿದ್ದ ಅಕ್ಷರ ದಾಸೋಹ ಅಧಿಕಾರಿ.....ಪೊಲೀಸ್ ಠಾಣೆ ಮೆಟ್ಟಿಲೇರಿದ 2ನೇ ತರಗತಿ ವಿದ್ಯಾರ್ಥಿ.....ರಾಜ್ಯ ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಷಡಾಕ್ಷರಿ ಯವರ ಬಗ್ಗೆ ಒಂದು ಅವಲೋಕನ..... ನಿಮಗಾಗಿ ಒಂದಿಷ್ಟು ಮಾಹಿತಿ.....ಪ್ರಾಥಮಿಕ ಶಾಲಾ ಶಿಕ್ಷಕ ಬಸವರಾಜ ಅಮಾನತು.....OPS' ಜಾರಿ ಕುರಿತಂತೆ 'ಕರ್ನಾಟಕ ಹೈಕೋರ್ಟ್' ಮಹತ್ವದ ತೀರ್ಪು..... ರಾಜ್ಯ ಸರ್ಕಾರಿ ನೌಕರರಿಗೆ ಬಹುಮುಖ್ಯ ಮಾಹಿತಿ.....ಬಿಸಿಯೂಟ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.....ದೂರವಾಯ್ತು ಬಹುದೊಡ್ಡ ಆತಂಕ.....ಶಿಕ್ಷಕ ನರೇಂದ್ರ ಬಂಧನ.....ಶಾಲೆಯಲ್ಲಿ ವಶಕ್ಕೆ ತೆಗೆದುಕೊಂಡ ಪೊಲೀಸರು.....