LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಬೆಳ್ಳಂ ಬೆಳಿಗ್ಗೆ ಹುಬ್ಬಳ್ಳಿ ಧಾರವಾಡದಲ್ಲಿ ACB ಅಧಿಕಾರಿಗಳ 5 ಕಡೆ ದಾಳಿ

ಹುಬ್ಬಳ್ಳಿ ಧಾರವಾಡ -

ಹುಬ್ಬಳ್ಳಿ ಧಾರವಾಡದಲ್ಲಿ ACB ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ 5 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಪಾಸ್ತಿ ಮಾಡಿದ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳ ಟೀಮ್ ಹುಬ್ಬಳ್ಳಿ ಧಾರವಾಡದಲ್ಲಿ ಐದು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದ್ದಾರೆ.

ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ದೇವರಾಜ ಕಲ್ಮೇಶ ಶಿಗ್ಗಾವಿ ಇವರು ಹುಬ್ಬಳ್ಳಿಯಿಂದ ವರ್ಗಾವಣೆಯಾಗಿದ್ದು ಇನ್ನೂ ಇವರಿಗೆ ಹುದ್ದೆಯನ್ನು ತೊರಿಸಿಲ್ಲ  ಇವರ ಮನೆಯ ಮೇಲೆ ಧಾರವಾಡದ ACB ಅಧಿಕಾರಿಗಳ 3 ಟೀಮ್ ದಾಳಿ ಮಾಡಿದೆ. ಎಸಿಬಿ ಎಸ್ಪಿ ಬಿ ಎಸ್ ನೇಮಗೌಡ ನೇತೃತ್ವದಲ್ಲಿ ದಾಳಿಯನ್ನು ಮಾಡಲಾಗಿದೆ.

ಹುಬ್ಬಳ್ಳಿಯ ಒಂದು ಕಡೆ ಮತ್ತು ಧಾರವಾಡದ ಎರಡು ಕಡೆಗಳಲ್ಲಿ  ಏಕಕಾಲದಲ್ಲಿ ದಾಳಿ ಮಾಡಲಾಗಿದೆ‌. ಇನ್ನೂ ಬೆಳ್ಳಂ ಬೆಳಿಗ್ಗೆ ಅಧಿಕಾರಿಗಳು ಸೂರ್ಯ ಉದಯಿಸುವ ಮುನ್ನವೇ ಭ್ರಷ್ಟ ಅಧಿಕಾರಿಗಳ ಮನೆಯ ಬಾಗಿಲು ಬಡಿದು ಪರಿಶೀಲನೆ ಮಾಡತಾ ಇದ್ದಾರೆ.

ಇನ್ನೂ ಹಾವೇರಿಯ ಮತ್ತು ದಾವಣಗೆರೆ ಎಸಿಬಿ ಅಧಿಕಾರಿಗಳ ಎರಡು ತಂಡ ಎರಡು ಕಡೆಗಳಲ್ಲಿ ದಾವಣಗೆರೆಯಲ್ಲಿ ಅರಣ್ಯ ಇಲಾಖೆಯ ಎಸಿಎಫ್ ಶ್ರೀನಿವಾಸ್ ಅವರ ಮನೆಯ ಎರಡು ಕಡೆಗಳಲ್ಲಿ ಅಧಿಕಾರಿಗಳು ಶೋಧ ಮಾಡತಾ ಇದ್ದಾರೆ.

ಒಟ್ಟಾರೆ ಬೆಳ್ಳಂ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ಹುಬ್ಬಳ್ಳಿ ಧಾರವಾಡ ದಲ್ಲಿ ಐದು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿ ಪರಿಶೀಲನೆ ಮಾಡತಾ ಇದ್ದಾರೆ.ಮುಂದುವರಿದಿದೆ ಕಾರ್ಯಾಚರಣೆ ಮನೆ ಮತ್ತು ಕಚೇರಿಯಲ್ಲಿ ಪರಿಶೀಲನೆ ಮಾಡತಾ ಇದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....