LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದಲ್ಲಿ 59 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ - ಶಾಲೆಗಳ ಅಭಿವೃದ್ದಿ ಶಿಕ್ಷಕರ ಬಗ್ಗೆ ತಲೆಕೇಡಿಸಿಕೊಳ್ಳದ ಇಲಾಖೆ

ಬೆಂಗಳೂರು -

ಶಿಕ್ಷಕರ ನೇಮಕ, ಶಾಲೆಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್‌.ಕೆ.ಮನಮೋಹನ ಅವರಿಗೆ ಎಐಡಿಎಸ್‌ಒ ಸಂಘಟನೆಯಿಂದ ಮನವಿ ಸಲ್ಲಿಸಲಾಯಿತು.

40 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರನ್ನು ನಿಯೋಜಿ ಸಬೇಕು.ರಾಜ್ಯದ 46 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳಲ್ಲಿ 59 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. 7 ಸಾವಿರ ಏಕೋಪಾಧ್ಯಾಯ ಶಾಲೆಗಳಿವೆ. ಶಾಲೆಯ ಮಕ್ಕಳಿಗೆ ಮೊಟ್ಟೆ, ಬಿಸಿ ಊಟಕ್ಕೆ ತರಕಾರಿ ತರಲು, ಇಲಾಖೆ ಕೆಲಸದ ಮೇಲೆ ಶಿಕ್ಷಕರು ಶಾಲೆಯಿಂದ ಆಚೆ ಹೋದರೆ ಮಕ್ಕಳಿಗೆ ಯಾರು ಗತಿ?' ಎಂದು ಎಐಡಿಎಸ್‌ಒ ಅಧ್ಯಕ್ಷೆ ಟಿ.ಈ.ಅಶ್ವಿನಿ ಪ್ರಶ್ನಿಸಿದರು.

ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 73 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿಯಿದೆ. ಗುತ್ತಿಗೆ ಆಧಾರದಲ್ಲಿ ನೇಮಕಗೊಳ್ಳುವ ಶಿಕ್ಷಕರ ಜೀವನ ನಿರ್ವಹಣೆಯೇ ಕಷ್ಟವಾಗಿದೆ. ಇಂತಹ ಸ್ಥಿತಿಯಲ್ಲಿ ಸಮರ್ಥವಾಗಿ ಬೋಧಿಸಲು ಸಾಧ್ಯವಾಗುವುದಿಲ್ಲ. ಶಿಕ್ಷಣದ ಗುಣಮಟ್ಟ ವರ್ಷದಿಂದ ವರ್ಷಕ್ಕೆ ಕುಸಿಯು ತ್ತಿದ್ದು, ಪಾಲಕರು, ಶಿಕ್ಷಕರು, ಶಿಕ್ಷಣ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ ಎಂದರು.

ಶಾಲೆಗಳಲ್ಲಿ ಸುಸಜ್ಜಿತ ಕೊಠಡಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಪ್ರಯೋಗಾ ಲಯ, ಗ್ರಂಥಾಲಯ ಸಹಿತ ಅಗತ್ಯ ಸೌಲಭ್ಯ ಕಲ್ಪಿಸ ಬೇಕು. ಕಡ್ಡಾಯ ತೇರ್ಗಡೆ ನೀತಿ ಕೈಬಿಟ್ಟು 1ನೇ ತರಗತಿಯಿಂದಲೇ ಪಾಸ್‌, ಫೇಲ್‌ ಪದ್ಧತಿ ಜಾರಿ ಗೊಳಿಸಬೇಕು.

ಈಗ ಸಿಬಿಎಸ್‌ಸಿ ಮಾದರಿಯಲ್ಲಿ 80ಕ್ಕೆ ಕೇವಲ 13 ಅಂಕ ಪಡೆದರೆ ಉತ್ತೀರ್ಣಗೊಳಿಸುವ ನಿಯಮಾ ವಳಿಯಿಂದಾಗಿ ಶೈಕ್ಷಣಿಕ ಗುಣಮಟ್ಟ ಪಾತಾಳಕ್ಕೆ ತಲುಪುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....