LIVE TV LocalCrimeNationalInternationalPoliticsEducationTechnologyEntertainmentSportsFeature
State News

6ನೇ ತರಗತಿಯಿಂದ ಮಕ್ಕಳಿಗೆ AI ಪಾಠ....ಸರ್ಕಾರಿ ಶಾಲೆಗಳ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ.....

ಬೆಂಗಳೂರು -

6ನೇ ತರಗತಿಯಿಂದ ಮಕ್ಕಳಿಗೆ AI ಪಾಠ ಸರ್ಕಾರಿ ಶಾಲೆಗಳ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ ಏನೆಲ್ಲಾ ಅನುಕೂಲ ಆಗಲಿವೆ ಗೊತ್ತಾ ಹೌದು ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡುತ್ತಲೇ ಇದೆ. ಈ ಮೂಲಕ ಮಕ್ಕಳ ಪ್ರಗತಿಗೆ ಸರ್ಕಾರ ಶ್ರಮಿಸುತ್ತಿದೆ. ಅಲ್ಲದೆ ಡಿಕೆ ಶಿವಕುಮಾರ್‌ ಅವರು ಸಿಎಂ ಆದ ನಂತರ ಇನ್ನಷ್ಟು ಹೆಚ್ಚಿನ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಈ ಎಲ್ಲಾ ಬೆಳವಣಿಗೆ ನಡುವೆ ಈಗ ಎಐ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ.ಹೌದು ಕರ್ನಾಟಕದ ಶಿಕ್ಷಣ ಇಲಾಖೆ ಕ್ರಾಂತಿಕಾರಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಇದರ ಭಾಗವಾಗಿ ಈಗ ಮತ್ತೊಂದು ಹೊಸ ಹೆಜ್ಜೆ ಇಡಲು ಎಲ್ಲಾ ತಯಾರಿ ನಡೆದಿದೆ. ಹಾಗೆಯೇ ಎಐ ಕ್ಷೇತ್ರದಲ್ಲಿ ಬೆಂಗಳೂರು ಹಾಗೂ ಕರ್ನಾಟಕ ಈಗಾಗಲೇ ಅಗ್ರಸ್ಥಾನದಲ್ಲಿದ್ದು, ಇದನ್ನು ಮಕ್ಕಳಿಗೂ ಪರಿಚಯಿಸುವ ಕೆಲಸವಾಗುತ್ತಿದೆ. ಈ ಬಗ್ಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್‌ ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಕುರಿತು ಶಿಕ್ಷಣವನ್ನು ಇನ್ನಷ್ಟು ಮುಂಚಿತವಾಗಿ ಪರಿಚಯಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಪ್ರಸ್ತುತ 9ನೇ ತರಗತಿ ವಿದ್ಯಾರ್ಥಿ ಗಳಿಗೆ AI ತರಬೇತಿ ಆರಂಭವಾಗಿದ್ದು ಇದನ್ನು 6ನೇ ತರಗತಿಯಿಂದಲೇ ವಿಸ್ತರಿಸುವ ಸಾಧ್ಯತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸರ್ಕಾರದ 100 ದಿನಗಳ ಕಾರ್ಯಕ್ರಮಗಳು, ನೇಮಕಾತಿ ಮತ್ತು ಆದ್ಯತಾ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಇಲಾಖೆಯ ಸಹಕಾರದೊಂದಿಗೆ ಖಾಸಗಿ ಸಂಸ್ಥೆಗಳ ನೆರವು ಪಡೆಯುವ ಬಗ್ಗೆಯೂ ಚಿಂತನೆ ನಡೆದಿದೆ. AI ಶಿಕ್ಷಣ ನೀಡಲು ಗೂಗಲ್ ಸಂಸ್ಥೆ ಆಸಕ್ತಿ ತೋರಿಸಿದ್ದು, ತೆಲಂಗಾಣದಲ್ಲಿ ನಡೆಯುತ್ತಿರುವ AI ತರಬೇತಿ ಮಾದರಿಯನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ 1,000 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ ಈ ಶಾಲೆಗಳ ಅಭಿವೃದ್ಧಿಗೆ ಸಂಬಂಧಿಸಿದ ವಿವರವಾದ ಯೋಜನಾ ವರದಿ (DPR) ಮತ್ತು ಟೆಂಡರ್ ಪ್ರಕ್ರಿಯೆಗಳನ್ನು ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಸರಳಗೊಳಿಸಲಾಗಿದೆ. ನವೆಂಬರ್ 14ರೊಳಗೆ KPS ಶಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಇದರ ಜೊತೆಗೆ, CSR ನಿಧಿಯ ಮೂಲಕ 100 KPS ಶಾಲೆಗಳನ್ನು ಅಭಿವೃದ್ಧಿಪಡಿಸುವ ಉದ್ದೇಶವಿದ್ದು, ಈ ಪೈಕಿ 60 ಶಾಲೆಗಳ ಅಭಿವೃದ್ಧಿಗೆ ಕಂಪನಿಗಳು ಆಸಕ್ತಿ ತೋರಿಸಿವೆ ಎಂದು ಸಭೆಯಲ್ಲಿ ತಿಳಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
6ನೇ ತರಗತಿಯಿಂದ ಮಕ್ಕಳಿಗೆ AI ಪಾಠ....ಸರ್ಕಾರಿ ಶಾಲೆಗಳ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ.....ಮದ್ಯಮುಕ್ತ ಕಂದಕೂರಿನಲ್ಲಿ ಬೃಹತ್ ಪಾದಯಾತ್ರೆ.....ಪೊಲೀಸ್ ಇನ್ಸ್ಪೆಕ್ಟರ್ ವಿಶ್ವನಾಥ ಹಿರೇಗೌಡರ ಟೀಮ್ ಜೊತೆ ಜನರ ಬೃಹತ್ ಜಾಗೃತಿ ನಡಿಗೆ.....ಬ್ಯಾಟ್ ನಿಂದ ಹೊಡೆದು ಮಗಳನ್ನು ಕೊಲೆ ಮಾಡಿದ ಶಿಕ್ಷಕ.....ಕೆರೆಯಲ್ಲಿ ಈಜಾಡಲು ಹೋಗಿ 6ನೇ ತರಗತಿಯ ಮೂವರು ವಿದ್ಯಾರ್ಥಿಗಳು ಸಾವು.....ಶಿಕ್ಷಕರ ಸಮಸ್ಯೆ ಗಳ ಕುರಿತು ಇಲಾಖೆಯ ಆಯುಕ್ತರ ಭೇಟಿಯಾದ KSPSTA ಟೀಮ್.....ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಸರ್ಕಾರಿ ನೌಕರರು.....40K ತಗೆದುಕೊಳ್ಳುವಾಗ ಲಾಕ್.....ಸರ್ಕಾರಿ ನೌಕರರಿಗೆ ಬೆದರಿಕೆ.....ಪೊಲೀಸರ ಬಲೆಗೆ ಬಿದ್ದ RTI ಕಾರ್ಯಕರ್ತ.....ಶಿಕ್ಷಕರ ವರ್ಗಾವಣೆ ಗೆ ಶಿಕ್ಷಣ ಸಚಿವರ ಸ್ಪಂದನೆ.....ಶಿಕ್ಷಣ ಸಚಿವರನ್ನು ಭೇಟಿಯಾದ ಶಿಕ್ಷಕರು.....ಶಿಕ್ಷಣ ಸಚಿವರ ಮನೆಯ ಮುಂದೆ ಶಿಕ್ಷಕರು.....ಪ್ರಭಾರಿ ಮುಖ್ಯಶಿಕ್ಷಕ ಅಮಾನತು..... ಅಮಾನತು ಮಾಡಿ ಆದೇಶ.....