ನವದೆಹಲಿ -
ಬಿ.ಇಡಿ ಪದವೀಧರ ಶಿಕ್ಷಕರಿಗೆ 6 ತಿಂಗಳ ತರಬೇತಿ ಕೇಂದ್ರ ಶಿಕ್ಷಣ ಸಚಿವಾಲಯ ಮಹತ್ವದ ಹೆಜ್ಜೆ ಹೌದು
ಬಿ.ಇಡಿ ಪದವಿ ಪಡೆದಿರುವ ಸೇವಾನಿರತ ಶಿಕ್ಷಕರಿಗೆ ಪ್ರಾಥಮಿಕ ಶಿಕ್ಷಕರ ಶಿಕ್ಷಣದ (ಪಿಟಿಇ) ಅಡಿಯಲ್ಲಿ 6 ತಿಂಗಳ ಸರ್ಟಿಫಿಕೇಟ್ ಕೋರ್ಸ್ (ಬ್ರಿಡ್ಜ್ ಕೋರ್ಸ್) ಅನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರುತರಬೇತಿಯನ್ನು ರಾಷ್ಟ್ರೀಯ ಮುಕ್ತ ಶಾಲಾ ಸಂಸ್ಥೆ (ಎನ್‌ಐಒಎಸ್) ಮೂಲಕ ಜಾರಿಗೆ ತರಲಾ ಗುವುದು ಎಂದಿದ್ದಾರೆ
ಮಕ್ಕಳ ಕೇಂದ್ರಿತ, ಎಲ್ಲರನ್ನೂ ಒಳಗೊಂಡ ಮತ್ತು ಅಭಿವೃದ್ಧಿಗೆ ಸೂಕ್ತವಾದ ಬೋಧನಾ ವ್ಯವಸ್ಥೆ ಯೊಂದಿಗೆ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತದೆ ಇದು ಪ್ರಾಥಮಿಕ ಶಿಕ್ಷಣದ ಗುಣಮಟ್ಟವನ್ನು ಬಲಪಡಿ ಸುತ್ತದೆ ಅಗತ್ಯ ಕೌಶಲ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಶಿಕ್ಷಕರಿಗೆ ಸಹಾಯ ಮಾಡುತ್ತದೆ ಎಂದು ಹೇಳಿದೆ.ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎನ್‌ಸಿಟಿಇ) ಪ್ರಕಾರ ಈ ತರಬೇತಿಯನ್ನು ವಿನ್ಯಾಸ ಗೊಳಿಸಲಾಗಿದೆ ಇದರಲ್ಲಿ ಶಿಕ್ಷಕರಿಗೆ 10 ದಿನ ಆನ್ ಲೈನ್ ಹಾಗೂ 20 ದಿನ ಆಫ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿದ್ದು ಭವಿಷ್ಯದಲ್ಲಿ ಶಿಕ್ಷಕರಿಗೆ ಇದು ಸಾಕಷ್ಟು ಪ್ರಮಾಣದಲ್ಲಿ ಅನುಕೂಲ ವಾಗಲಿದೆ ಎಂದರು
ಸುದ್ದಿ ಸಂತೆ ನ್ಯೂಸ್ ನವದೆಹಲಿ.....